Central Govt ಬಡ್ತಿಯಲ್ಲಿ ಒಬಿಸಿಗೆ ಮೀಸಲು ಪ್ರಸ್ತಾಪವೇ ಇಲ್ಲ
ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಬಡ್ತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ
Team Udayavani, Dec 11, 2023, 9:25 PM IST
ನವದೆಹಲಿ: ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ಬಡ್ತಿ ನೀಡಲು ಮೀಸಲಾತಿ ನೀಡುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಲೋಕಸಭೆಯಲ್ಲಿ ಸೋಮವಾರ ಸ್ಪಷ್ಟಪಡಿಸಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನದ 6ನೇ ದಿನದಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟಾಗೋರ್ ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಮೇಲಿನಂತೆ ಪ್ರತಿಕ್ರಿಯಿಸಿದರು.
ಕೇಂದ್ರ ಶಿಕ್ಷಣ ಸಂಸ್ಥೆಗಳ ಕಾಯ್ದೆ-2019 ವಿಶ್ವವಿದ್ಯಾನಿಲಯಗಳೆಲ್ಲವನ್ನೂ ಒಂದು ಘಟಕವಾಗಿ ಪರಿಗಣಿಸಿ ಮೀಸಲು ಒದಗಿಸುತ್ತಿದೆ. ಕಾಯ್ದೆ ಪ್ರಕಾರವಷ್ಟೇ ಮೀಸಲು ನೀಡಲಾಗುತ್ತಿದ್ದು, ಯಾವುದೇ ಹೊಸ ಪ್ರಸ್ತಾಪವನ್ನೂ ಸರ್ಕಾರ ಹೊಂದಿಲ್ಲವೆಂದು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಸಭಾತ್ಯಾಗ: ಇತ್ತ ರಾಜ್ಯ ಸಭೆಯಲ್ಲೂ ವಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಕೇಂದ್ರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ವಿಪಕ್ಷಗಳ ಒಕ್ಕೂಟ ಐಎನ್‌ಡಿಐಎ ಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದ್ದಾರೆ.
ಟಿಎಂಸಿ , ಆಪ್, ಎಸ್‌ಪಿ, ಜನತಾದಳ (ಯುನೈಟೆಡ್), ಡಿಎಂಕೆ, ಎನ್‌ಸಿಪಿ, ಸಿಪಿಐ ಹಾಗೂ ಶಿವಸೇನೆ (ಯುಟಿಬಿ) ಸಂಸದರು ಸದನದಿಂದ ಹೊರ ನಡೆದಿದ್ದಾರೆ.
ಎಲ್ಲದ್ದಕ್ಕೂ ಕೋಮುಬಣ್ಣ ಬಳಿಯಬೇಡಿ: ರಾಜ್ಯಸಭೆಯಲ್ಲಿ ಮಧ್ಯಾಹ್ನದ ಅವಧಿಗಳ ಸಮಯ ಬದಲಾಯಿಸಿದ್ದರ ಬಗ್ಗೆಯೂ ತೀವ್ರ ಚರ್ಚೆ ನಡೆದಿದೆ. ಮುಸ್ಲಿಮರ ಪ್ರಾರ್ಥನೆಗೆ ಅಡ್ಡಿಪಡಿಸಲು ಸಮಯ ಬದಲಿಸಲಾಗಿದೆ ಎಂದು ಡಿಎಂಕೆ ಸಂಸದ ತಿರುಚ್ಚಿ ಶಿವ ಆರೋಪಿಸಿದ್ದಾರೆ. ಬಿಜೆಪಿ ನಾಯಕ ಮುಕ್ತಾರ್ ಅಬ್ಟಾಸ್ ನಖೀÌ ಈ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲದಕ್ಕೂ ಕೋಮು ಬಣ್ಣ ನೀಡುವುದು ಸಲ್ಲದು ಎಂದಿದ್ದಾರೆ.
ರಾಜ್ಯಸಭೆಯಲ್ಲಿ ಜಮ್ಮುಕಾಶ್ಮೀರ ಮಸೂದೆ ಮಂಡನೆ
ಜಮ್ಮುಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ -2023 ಹಾಗೂ ಜಮ್ಮುಕಾಶ್ಮೀರ ಮರುವಿಂಗಡಣೆ (ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕಾರಕ್ಕಾಗಿ ಕೇಂದ್ರಗೃಹ ಸಚಿವ ಅಮಿತ್ ಶಾ ಮಂಡನೆ ಮಾಡಿದ್ದಾರೆ. ಇದೇ ವೇಳೆ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದು ನಿರ್ಣಯದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತಂತೆ ಚರ್ಚೆಗಳೂ ನಡೆದಿದ್ದು, ಕಣಿವೆ ಮಾತ್ರವಲ್ಲ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವೂ ಭಾರತಕ್ಕೇ ಸೇರಿದ್ದು, ಅದನ್ನು ಯಾರು ಕಸಿಯಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.