ಕಳ್ಳತನದ ವೇಳೆ ಹೃದಯಾಘಾತ : ಕದ್ದ ಹಣಕ್ಕಿಂತ ಹೆಚ್ಚು ಆಸ್ಪತ್ರೆ ಬಿಲ್ ಕಟ್ಟಿದ ಚೋರರು
Team Udayavani, Apr 2, 2021, 1:59 PM IST
ಉತ್ತರ ಪ್ರದೇಶ : ದರೋಡೆ ವೇಳೆ ತಮ್ಮ ನಿರೀಕ್ಷೆಗಿಂತ ಅಧಿಕ ಹಣ ಸಿಕ್ಕಿದ್ದರಿಂದ ಸಂತಸಗೊಂಡ ಕಳ್ಳನಿಗೆ ಹಾರ್ಟ್ ಅಟ್ಯಾಕ್ ಆದ ಘಟನೆ ಉತ್ತರಪ್ರದೇಶದ ಬಿಜೋರ್‌ನ ಕೊತ್ವಾಲಿ ದೇಹತ್ ಎಂಬಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಮಾರ್ಚ್ ತಿಂಗಳಿನಲ್ಲಿ ಕೊತ್ವಾಲ್ ದೇಹತ್ ಏರಿಯಾದಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, ಬುಧವಾರ (ಮಾರ್ಚ್.31) ನವಾಜ್ (30) ಹಾಗೂ ಇಯಾಜ್ (30) ಹೆಸರಿನ ಇಬ್ಬರು ಖದೀಮರನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಬಂಧಿತರು ಆಲಿಪುರ್ ಮತ್ತು ನಗೀನಾ ನಿವಾಸಿಗಳೆಂದು ವಿಚಾರಣೆ ಸಂದರ್ಭದಲ್ಲಿ ತಿಳಿದಿದೆ.
ಕಳ್ಳತನ ಮಾಡಲು ಹೋಗಿದ್ದ ಕಳ್ಳನಿಗೆ ಆತನ ನಿರೀಕ್ಷೆಗೂ ಮೀರಿ ಹಣ ದೊರೆತಿದೆ. ಈ ಖುಷಿಗೆ ಚೋರನಿಗೆ ಹೃದಯಾಘಾತವಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು.ಕಳ್ಳತನ ಮಾಡಿದ ಹಣಕ್ಕೂ ಹೆಚ್ಚು ಆಸ್ಪತ್ರೆ ಬಿಲ್ ಕಟ್ಟಬೇಕಾಯಿತು ಎಂದು ಬಂಧಿತ ಖದೀಮರು ಪೊಲೀಸರ ಎದುರು ತಪ್ಪೊಪ್ಪಿಕೊಂಡಿದ್ದಾರೆ.
ಇನ್ನು ಕಳೆದ ತಿಂಗಳು ಸಾರ್ವಜನಿಕ ಸೇವಾ ಕೇಂದ್ರದ ಮಾಲೀಕರಾದ ನವಾಬ್ ಹೈದರ್ ಫೆ.16, 17ರಂದು ಏಳು ಲಕ್ಷ ಕಳುವಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಕಳ್ಳತನದ ಜಾಡು ಹಿಡಿದ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನವಾಜ್ ಹಾಗೂ ಇಯಾಜ್ ಎಂಬ ಇಬ್ಬರು ಕಳ್ಳರನ್ನು ವಿಚಾರಣೆಗೆ ಒಳಪಡಿಸಲಾಯಿತು. ಆಗ ಈ ಘಟನೆ ಬಗ್ಗೆ ತಿಳಿದು ಬಂದಿದೆ ಎಂದು ಬಿಜೋರ್ ಪೊಲೀಸ್ ಇನ್ಸ್‍ಪೆಕ್ಟರ್ ಧರ್ಮವೀರ್ ಸಿಂಗ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.