ದೇಶದ ಹಲವು ರಾಜ್ಯಗಳಲ್ಲಿ ಮೆಡಿಕಲ್ ಆಕಿಜನ್ಸ್ ಕೊರತೆ
ಬಳಕೆ ಪ್ರಮಾಣ ಪ್ರತಿ ದಿನಕ್ಕೆ 2,800 ಟನ್‌ಗೆ ಏರಿಕೆಯಾಗಿದೆ
Team Udayavani, Sep 29, 2020, 6:33 PM IST
ನವದೆಹಲಿ: ದೇಶದ ಹಲವು ರಾಜ್ಯಗಳ ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಉಂಟಾಗಿದೆ. ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದೇಶದಲ್ಲಿ
ಹೆಚ್ಚಾಗುತ್ತಿರುವಂತೆಯೇ ಈ ಆತಂಕಕಾರಿ ವಿಚಾರ ಹೊರಬಿದ್ದಿದೆ.
ದೇಶದ ಪೂರ್ವ ಭಾಗ ಮತ್ತು ಪಶ್ಚಿಮ ಭಾಗಗಳಲ್ಲಿ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡುವ ಸ್ಥಾವರಗಳು ಹೆಚ್ಚಾಗಿವೆ. ಆದರೆ, ನವದೆಹಲಿ, ಮಧ್ಯ ಪ್ರದೇಶ,ಬಿಹಾರಗಳಲ್ಲಿಅಂಥ ಸ್ಥಾವರಗಳ ಕೊರತೆ ಇದೆ.
ಮಾರ್ಚ್‌ನಲ್ಲಿ 1,300 ಸೋಂಕಿನ ಪ್ರಕರಣಗಳು ವರದಿಯಾಗಿದ್ದಾಗ 750 ಟನ್ ಮೆಡಿಕಲ್ ಆಕ್ಸಿಜನ್ ಬಳಕೆ ಮಾಡಲಾಗಿತ್ತು ಎಂದು ಅಖಿಲ ಭಾರತ ಅನಿಲ
ಉತ್ಪಾದಕರ ಸಂಘಟನೆ ಅಧ್ಯಕ್ಷ ಸಾಕೇತ್ ಟಿಕು ತಿಳಿಸಿದ್ದಾರೆ. ಈ ತಿಂಗಳಲ್ಲಿ ಅದರ ಬಳಕೆ ಪ್ರಮಾಣ ಪ್ರತಿ ದಿನಕ್ಕೆ 2,800 ಟನ್‌ಗೆ ಏರಿಕೆಯಾಗಿದೆ ಎಂದಿದ್ದಾರೆ.
ಹೀಗಾಗಿ, ಆಸ್ಪತ್ರೆ ಮತ್ತು ವೈದ್ಯಕೀಯ ಅಗತ್ಯ ಪೂರೈಸಲು ಹೆಣಗಾಡುವಂತಾಗಿದೆ ಎಂದರು.
ದೇಶದಲ್ಲಿ ಕೋವಿಡ್ ಸೋಂಕಿನಿಂದ ಗುಣ ಮುಖರಾಗುವವರ ಶೇಕಡಾವಾರು ಪ್ರಮಾಣ 83ಕ್ಕೆ ಏರಿಕೆಯಾಗಿದೆ. ಕರ್ನಾಟಕ, ಮಹಾರಾಷ್ಟ್ರ. ಆಂಧ್ರಪ್ರದೇಶ, ತಮಿಳುನಾಡು, ಉ.ಪ್ರದೇಶ, ದೆಹಲಿ, ಒಡಿಶಾ, ಕೇರಳ, ಪ. ಬಂಗಾಳ, ಮಧ್ಯ ಪ್ರದೇಶಗಳಿಂದ ಶೇ.73ರಷ್ಟು ಗುಣ ಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ದಿನವಹಿ 20 ಸಾವಿರ ಗುಣಮುಖರಾಗಿದ್ದರೆ, ಕರ್ನಾಟಕ, ಆಂಧ್ರದಲ್ಲಿ 7 ಸಾವಿರಕ್ಕಿಂತಲೂ ಅಧಿಕ ಮಂದಿ ಚೇತರಿಸಿಕೊಂಡಿದ್ದಾರೆ.
ಸೋಮವಾರ ಬೆಳಗ್ಗೆ 8 ಗಂಟೆಯಿಂದ ಮಂಗಳವಾರ ಬೆಳಗ್ಗೆ 8 ಗಂಟೆಯ ವರೆಗಿನ ಅವಧಿಯಲ್ಲಿ 70,589 ಹೊಸ ಕೇಸುಗಳು ದಾಖಲಾಗಿವೆ. 776 ಮಂದಿ ಅಸುನೀಗಿದ್ದಾರೆ. ಕಳೆದ ಕೆಲ ದಿನಗಳಿಗೆ ಹೋಲಿಕೆ ಮಾಡಿದರೆ ದಿನವಹಿ ಸೋಂಕು ದಾಖಲೆ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
UP bypolls; ನಿಯಮ ಉಲ್ಲಂಘನೆ: 7 ಪೊಲೀಸರನ್ನು ಅಮಾನತುಗೊಳಿಸಿದ ಚುನಾವಣ ಆಯೋಗ
Kallakurichi ಕಳ್ಳಭಟ್ಟಿ ದುರಂತ: ಪ್ರಕರಣ ಸಿಬಿಐಗೆ ನೀಡಿದ ಮದ್ರಾಸ್ ಹೈಕೋರ್ಟ್
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
MUST WATCH
ಹೊಸ ಸೇರ್ಪಡೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…
Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ
UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.