ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ : 3 ಸೈನಿಕರು ಹುತಾತ್ಮ, ಮಹಿಳೆ ಬಲಿ
Team Udayavani, Feb 23, 2017, 8:57 AM IST
ಶ್ರೀನಗರ : ಶೋಪಿಯಾನ್ ಜಿಲ್ಲೆಯ ಕುಂಗೂ ಎಂಬಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆಗಳ ಗಸ್ತುವಾಹನವನ್ನು ಗುರಿಯಾಗಿರಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು ಮೂವರು ಸೈನಿಕರು ಹುತಾತ್ಮರಾಗಿದ್ದು,ಓರ್ವ ಮಹಿಳೆ ಬಲಿಯಾಗಿರುವ ಕುರಿತು ವರದಿಯಾಗಿದೆ.
ಉಗ್ರರು ನಸುಕಿನ ವೇಳೆ ನಡೆಸಿದ ಹೊಂಚು ದಾಳಿಯಲ್ಲಿ 5 ಮಂದಿ ರಾಷ್ಟ್ರೀಯ ರೈಫಲ್ಸ್ಗೆ ಸೇರಿದ ಯೋಧರು ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಗಾಯಾಳುಗಳ ಪೈಕಿ ಇಬ್ಬರು ಹಿರಿಯ ಅಧಿಕಾರಿಗಳು ಎಂದು ತಿಳಿದು ಬಂದಿದೆ.
ಗುಂಡಿನ ದಾಳಿಯ ವೇಳೆ ಮನೆಯೊಳಗಿದ್ದ ಮಹಿಳೆ ಬಲಿಯಾಗಿರುವುದಾಗಿ ಸೇನಾ ಪಡೆಗಳು ತಿಳಿಸಿವೆ.
ಉಗ್ರರು ಮನ ಬಂದಂತೆ ಗುಂಡಿನ ದಾಳಿ ನಡೆಸಿದ ತಕ್ಷಣವೇ ಸೇನಾ ಪಡೆಗಳು ಪ್ರತಿ ದಾಳಿ ನಡೆಸಿದರಾದರೂ ಕತ್ತಲಿನಲ್ಲಿ ಉಗ್ರರು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಹೆಚ್ಚು ವರಿ ಪಡೆಗಳನ್ನು ಕರೆಸಿ ದಾಳಿ ನಡೆಸಿದ ಉಗ್ರರಿಗಾಗಿ ಭಾರಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.