ಒಂದೆಡೆ ರೈಲ್ವೆ ಹಳಿ ಮೇಲೆ ತಾಯಿ, ಇಬ್ಬರು ಮಕ್ಕಳ ಶವ, ಮೂರನೇ ಮಗು ಜೀವಂತವಾಗಿತ್ತು!
ಪ್ರಾಥಮಿಕ ತನಿಖೆ ಪ್ರಕಾರ 30ವರ್ಷದ ಮಹಿಳೆ ಹಾಗೂ 5-6 ವರ್ಷದ ಇಬ್ಬರು ಮಕ್ಕಳು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದರು.
Team Udayavani, Jul 2, 2020, 8:36 PM IST
Representative Image
ನವದೆಹಲಿ:ಮಹಿಳೆ ಹಾಗೂ ಇಬ್ಬರು ಮಕ್ಕಳ ಶವ ದೆಹಲಿ ಸಮೀಪದ ಮಂದವಲಿ ರೈಲ್ವೆ ನಿಲ್ದಾಣದ ಹಳಿ ಮೇಲೆ ಪತ್ತೆಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಒಂದು ವರ್ಷದ ಮಗು ಅಳುತ್ತ ರೈಲ್ವೆ ಹಳಿ ಸಮೀಪದ ಶವದ ಬಳಿ ಇದ್ದಿರುವುದು ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.
ಬೆಳಗ್ಗಿನ ಜಾವ 3.40ರ ಸುಮಾರಿಗೆ ಆನಂದ್ ವಿಹಾರ್ ರೈಲ್ವೆ ಸ್ಟೇಷನ್ ಸಿಬ್ಬಂದಿಗಳು ಹಿರಿಯ ಆರ್ ಪಿಎಫ್ ಅಧಿಕಾರಿಯೊಬ್ಬರಿಗೆ ಕರೆ ಮಾಡಿ ಮಹಿಳೆ ಜತೆ ಮೂವರು ಮಕ್ಕಳ ಶವ ರೈಲ್ವೆ ಹಳಿ ಸಮೀಪ ಬಿದ್ದಿರುವುದಾಗಿ ತಿಳಿಸಿದ್ದರು. ಕೂಡಲೇ ಆರ್ ಪಿಎಫ್ ಸಬ್ ಇನ್ಸ್ ಪೆಕ್ಟರ್ ಯೋಗೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು.
ಪೊಲೀಸರಿಗೂ ಸುದ್ದಿ ಮುಟ್ಟಿಸಲಾಗಿತ್ತು. ಪ್ರಾಥಮಿಕ ತನಿಖೆ ಪ್ರಕಾರ 30ವರ್ಷದ ಮಹಿಳೆ ಹಾಗೂ 5-6 ವರ್ಷದ ಇಬ್ಬರು ಮಕ್ಕಳು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದರು. ಸಮೀಪದ ಹಳಿಯಲ್ಲಿ ಮೂರನೇ ಮಗು ಜೀವಂತವಾಗಿ ಪತ್ತೆಯಾಗಿತ್ತು. ಪೊಲೀಸರನ್ನು ಕಂಡು ಮಗು ಅಳಲು ಆರಂಭಿಸಿತ್ತು. ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗುವಿನ ಆರೋಗ್ಯ ಸುರಕ್ಷಿತವಾಗಿದೆ ಎಂದು ವರದಿ ತಿಳಿಸಿದೆ.
ಮಹಿಳೆಯ ಪರ್ಸ್ ನಲ್ಲಿದ್ದ ಮೊಬೈಲ್ ಪೋನ್ ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಈಕೆ ಮಂದವಲಿ ಪ್ರದೇಶದ ಕಿರಣ ಎಂದು ಗುರುತಿಸಲಾಗಿದೆ. ಮೂರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.