Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!
ಕೋಮು ಬಣ್ಣ ಪಡೆದುಕೊಂಡ ಪ್ರಕರಣ.. ಮೂವರು ಆರೋಪಿಗಳ ಬಂಧನ..ವ್ಯಾಪಕ ಆಕ್ರೋಶ
Team Udayavani, Oct 7, 2024, 6:01 PM IST
ವಡೋದರಾ: ಗುಜರಾತ್‌ನ ವಡೋದರಾದಲ್ಲಿ 16 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಕೃತ್ಯ ನಡೆದ 48 ಗಂಟೆಗಳ ಒಳಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿಗೆ 1,100 ಸಿಸಿಟಿವಿ ಕೆಮರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಮೂಲತಃ ಉತ್ತರ ಪ್ರದೇಶಕ್ಕೆ ಸೇರಿದವರಾಗಿದ್ದು, ಹತ್ತು ವರ್ಷಗಳಿಂದ ವಡೋದರಾದಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಮುನ್ನಾ ವಂಝಾರ (27), ಮುಮ್ತಾಜ್ ವಂಝಾರ (36) ಮತ್ತು ಶಾರುಖ್ ವಂಝಾರ (36) ಎಂದು ಗುರುತಿಸಲಾಗಿದೆ.
ಮೂವರೂ ವಡೋದರಾ ನಗರದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ನರಸಿಂಹ ಕೋಮಾರ್ ಸುದ್ದಿಗಾರರಿಗೆ ತಿಳಿಸಿದರು.
ನವರಾತ್ರಿಯ ಸಂಭ್ರಮದ ರಾತ್ರಿ ನಗರದ ಹೊರವಲಯದಲ್ಲಿ ಗರ್ಬಾ ಆಚರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಹೋಗುತ್ತಿದ್ದ ವೇಳೆ ಹದಿಹರೆಯದ ಹುಡುಗಿ ನಿರ್ಜನ ಪ್ರದೇಶದಲ್ಲಿ ಆಕೆಯ ಸ್ನೇಹಿತನೊಂದಿಗೆ ಹೋಗುತ್ತಿದ್ದಳು. ಈ ವೇಳೆ ಮೂವರು ತಡೆದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಎರಡು ಬೈಕ್ ಗಳಲ್ಲಿ ಬಂದ ಐವರು ಹುಡುಗಿ ಮತ್ತು ಆಕೆಯ ಸ್ನೇಹಿತನನ್ನು ತಡೆದಿದ್ದು ಅವರಲ್ಲಿ ಇಬ್ಬರು ಸ್ಥಳದಿಂದ ತೆರಳಿದ್ದರು. ಮೂವರು ಅಪರಾಧ ಎಸಗಿದ್ದ, ಸಂತ್ರಸ್ತೆಯ ಮೊಬೈಲ್ ಫೋನ್ ಅನ್ನು ಕಸಿದುಕೊಂಡು ವಿಚಾರ ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಆರಂಭಿಸಿದ್ದರು. ಈ ಘಟನೆಯು ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದು, ಕೋಮು ವಿಚಾರವಾಗಿಯೂ ತಿರುಗಿದೆ. ನವರಾತ್ರಿ ಹಬ್ಬವನ್ನು ಆಚರಿಸಲು ರಾತ್ರಿ ವೇಳೆ ಹೊರಗೆ ಹೋಗುವ ಜನರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನೂ ಹುಟ್ಟುಹಾಕಿದ್ದು ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.