ಕುಪ್ವಾರಾದಲ್ಲಿ ಹಿಮಪಾತ: ಮೂವರು ಯೋಧರು ನಾಪತ್ತೆ
Team Udayavani, Dec 4, 2019, 8:45 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ತಂಗ್ಧರ್ ಪ್ರದೇಶದಲ್ಲಿ ಹಿಮಪಾತ ಸಂಭವಿಸಿದ ಪರಿಣಾಮ ಭಾರತೀಯ ಸೇನೆಯ ಮೂವರು ಯೋಧರು ನಾಪತ್ತೆಯಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಬುಧವಾರ ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಹಿಮಪಾತ ಸಂಭವಿಸಿದ್ದು ಕಾಣೆಯಾದ ಯೋಧರನ್ನು ಹುಡುಕಲು ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ. ಮಂಜುಗಡ್ಡೆಯ ಅಡಿಯಲ್ಲಿ ಸಿಲುಕಿದ್ದ ಓರ್ವ ಯೋಧನನ್ನು ರಕ್ಷಿಸಲಾಗಿದೆ. ಅದಾಗ್ಯೂ ಕಠಿಣ ಹವಾಮಾನ ಪರಿಸ್ಥಿತಿ ರಕ್ಷಣಾ ಕಾರ್ಯಾಚರಣೆಯನ್ನು ಕಷ್ಟಕರವಾಗಿಸಿದೆ.
ಈ ಮೊದಲು ನವೆಂಬರ್ 18 ರಂದು ಸಿಯಾಚಿನ್ ದಕ್ಷಿಣ ವಲಯದಲ್ಲಿ ಹಿಮಪಾತ ಸಂಭವಿಸಿದ ಪರಿಣಾಮ ನಾಲ್ಕು ಭಾರತೀಯ ಸೈನಿಕರು ಸಾವನ್ನಪ್ಪಿದ್ದರೆ, ಹಲವಾರು ಮಂದಿ ಗಾಯಗೊಂಡಿದ್ದರು. ಸಮುದ್ರ ಮಟ್ಟಕ್ಕಿಂತ ಸುಮಾರು 18,000 ಅಡಿ ಎತ್ತರದಲ್ಲಿ ಈ ಘಟನೆ ನಡೆದಿತ್ತು. ತತ್‌ಕ್ಷಣವೇ ಸ್ಥಳಕ್ಕೆ ತೆರಳಿದ ಹಿಮಪಾತ ರಕ್ಷಣಾ ಕಾರ್ಯಪಡೆ (ಎಆರ್‌ಟಿ) ತಂಡದ ಸಿಬಂದಿ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಿಮದ ಅಡಿ ಸಿಲುಕಿದ್ದ ಇತರ ಯೋಧರನ್ನು ರಕ್ಷಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.