ಚಿಕ್ಕಮಗಳೂರಿನ ಇಬ್ಬರು ಸೇರಿ ಒಟ್ಟು ಮೂವರು ನಕ್ಸಲರ ಎನ್ ಕೌಂಟರ್
Team Udayavani, Oct 29, 2019, 11:05 AM IST
ಪಾಲಕ್ಕಾಡ್: ಓರ್ವ ಮಹಿಳೆ ಸೇರಿದಂತೆ ಒಟ್ಟು ಮೂವರು ನಕ್ಸಲರನ್ನು ಎನ್ ಕೌಂಟರ್ ನಲ್ಲಿ ಕೊಂದ ಘಟನೆ ಕೇರಳದ ಪಾಲಕ್ಕಡ್ ಜಿಲ್ಲೆಯ ಮಂಜಕಟ್ಟಿ ಬೆಟ್ಟದಲ್ಲಿ ನಡೆದಿದೆ.
ಗುಂಡಿನ ದಾಳಿಯಲ್ಲಿ ಹತರಾದ ನಕ್ಸಲರನ್ನು ಕೇರಳದಲ್ಲಿ ಸಿಪಿಐ (ಮಾಕ್ರ್ಸಿಸ್ಟ್) ಪಕ್ಷದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿದಳಂ ತಂಡದ ಸದಸ್ಯರಾದ ಶ್ರೀಮತಿ, ಎ.ಎಸ್.ಸುರೇಶ್ ಹಾಗೂ ಕಾರ್ತಿ ಎಂದು ತಿಳಿದು ಬಂದಿದೆ.
ನಕ್ಸಲ್ ನಿಗ್ರಹ ಪಡೆ ಮತ್ತು ಥಂಡರ್ ಬೌಲ್ಟ್ ತಂಡ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಎನ್ ಕೌಂಟರ್ ಮಾಡಲಾಗಿದೆ. ನಾಲ್ವರು ನಕ್ಸಲರು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
ಘಟನೆಯಲ್ಲಿ ರಾಜ್ಯದ ಚಿಕ್ಕಮಗಳೂರಿನ ಇಬ್ಬರು ಮೃತಪಟ್ಟಿದ್ದಾರೆ. ಶ್ರೀಮತಿ ಮತ್ತು ಸುರೇಶ್ ಚಿಕ್ಕಮಗಳೂರಯ ಜಿಲ್ಲೆಯವರಾಗಿದ್ದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು. ಮತ್ತೋರ್ವ ನಕ್ಸಲ್ ಕಾರ್ತಿ ತಮಿಳುನಾಡು ಮೂಲದವರೆನ್ನಲಾಗುತ್ತಿದೆ.
ಶೃಳಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಿಂದ ನಕ್ಸಲ್ ಚಟುವಟಿಕೆಯಲ್ಲಿದ್ದು, ಆಕೆಯ ಮೇಲೆ 12 ಪ್ರಕರಣಗಳು ದಾಖಲಾಗಿವೆ.
ಸುರೇಶ್ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನಾಗಿದ್ದು, 2004ರಲ್ಲಿ ನಕ್ಸಲ್ ಗುಂಪಿಗೆ ಸೇರಿದ್ದ. ಪಾಲಕ್ಕಾಡ್ ನಲ್ಲಿ ಸೋಮವಾರ ಗುಂಡೇಟಿಗೆ ಬಲಿಯಾದ ಸುರೇಶ್ ಮೇಲೆ 21 ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ವರದಿಯಾಗಿದೆ.
ಮಲೆನಾಡಿನಲ್ಲಿ ನಕ್ಸಲ್ ಚಳವಳಿ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಾಗಿದ್ದರಿಂದ ನಕ್ಸಲ್ ಚಳವಳಿಯಲ್ಲಿದ್ದ ಸದಸ್ಯರು ಪೊಲೀಸರ ಗುಂಡಿಗೆ ಬಲಿಯಾಗಿದ್ದರಿಂದ ಹಾಗೂ ಕೆಲ ನಕ್ಸಲರು ಸರ್ಕಾರದ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಮುಖ್ಯವಾಹಿನಿಗೆ ಬಂದಿದ್ದರಿಂದ ಅಳಿದುಳಿದ ನಕ್ಸಲರು ಮಲೆನಾಡಿನಿಂದ ಹೊರ ರಾಜ್ಯಗಳ ನಕ್ಸಲ್ ಗುಂಪು ಸೇರಲಾರಂಭಿಸಿದ್ದರು. ಈ ಪೈಕಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುರೇಶ್ ಹಾಗೂ ಶೃಂಗೇರಿ ತಾಲೂಕಿ ಶ್ರೀಮತಿ ಕೂಡ ಕೇರಳ ರಾಜ್ಯದಲ್ಲಿನ ನಕ್ಸಲ್ ಗುಂಪು ಸೇರಿದ್ದರೆಂದು ತಿಳಿದು ಬಂದಿದ್ದು, ಕಳೆದ ಎರಡು ವರ್ಷಗಳಿಂದ ಇವರು ಕೇರಳದಲ್ಲಿ ನಕ್ಸಲ್ ಚಳವಳಿಯಲ್ಲಿ ಸಕ್ರೀಯರಾಗಿದ್ದರೆಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.