ಗುಜರಾತ್: ಕೈಗೆ ಮರ್ಮಾಘಾತ; ಮತ್ತೆ ನಾಲ್ವರ ರಾಜೀನಾಮೆ
Team Udayavani, Jul 29, 2017, 8:10 AM IST
ಗಾಂಧಿನಗರ: ಪ್ರಧಾನಿ ಮೋದಿ ತವರು ರಾಜ್ಯ ಹಾಗೂ ಈ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್‌ನಲ್ಲಿ ಕಾಂಗ್ರೆಸ್‌ಗೆ ಮತ್ತಷ್ಟು ಆಘಾತವಾಗಿದೆ. ಶುಕ್ರವಾರ ಮತ್ತೆ ನಾಲ್ವರು ಶಾಸಕರು ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನ ಒಟ್ಟಾರೆ ಬಲ ಕುಸಿದಿದೆ. ಪರಿಣಾಮ ರಾಜ್ಯಸಭೆಗೆ ಮರುಪ್ರವೇಶ ಬಯಸಿರುವ ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ ಅವರ ಭವಿಷ್ಯವೂ ಡೋಲಾಯಮಾನ ಸ್ಥಿತಿಗೆ ತಲುಪಿದೆ.
ಜು. 21ರಂದು ವಿಪಕ್ಷ ಸ್ಥಾನ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಪಕ್ಷದ ಹಿರಿಯ ನಾಯಕ ಶಂಕರ್‌ಸಿನ್ಹ ವಾಘೇಲಾ ಅವರ ಹಿಂದೆಯೇ ಅವರ ಬೆಂಬಲಿಗರು ಎನ್ನಲಾದ ಮತ್ತಷ್ಟು ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ಗುರುವಾರವಷ್ಟೇ 3 ಮಂದಿ ಶಾಸಕರು ರಾಜೀನಾಮೆ ನೀಡಿ, ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ತೊರೆದಿದ್ದರು. ಬಳಿಕ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಇವರ ಸಾಲಿಗೆ ಮತ್ತೆ ನಾಲ್ವರ ಸೇರ್ಪಡೆಯಾಗಿದೆ. ಇನ್ನು, ಕಾಂಗ್ರೆಸ್‌ನ ಮತ್ತೂಬ್ಬ ಹಿರಿಯ ಶಾಸಕ ರಾಘವ್ ಜಿ. ಪಟೇಲ್ ಸಹಿತ ಇನ್ನೂ 9 ಶಾಸಕರು ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದು, ಬಿಜೆಪಿಗೆ ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ತಮ್ಮನ್ನು ಅವಗಣಿಸಲಾಗುತ್ತಿದ್ದು, ರಾಜೀನಾಮೆ ನಿರ್ಧಾರ ಕೈಗೊಂಡಿದ್ದೇನೆ ಎಂದು ರಾಘವ್ ಹೇಳಿದ್ದಾರೆ.
ಅಮಿತ್ ಶಾ, ಸ್ಮತಿ, ರಜಪೂತ್ ನಾಮಪತ್ರ : ಆ.8ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವೆ ಸ್ಮತಿ ಇರಾನಿ ಮತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ವಘೇಲಾ ಅವರ ಸಂಬಂಧಿ ರಜಪೂತ್ ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಕಾಂಗ್ರೆಸ್‌ನ 7 ಶಾಸಕರ ರಾಜೀನಾಮೆಯಿಂದಾಗಿ 182 ಸದಸ್ಯಬಲದ ವಿಧಾನಸಭೆ ಇದೀಗ 175ಕ್ಕೆ ಇಳಿದಿದೆ.
ಈ ಮೂಲಕ ಪ್ರತಿ ಅಭ್ಯರ್ಥಿಯ ಗೆಲುವಿಗೆ 44 ಮತಗಳು ಬೇಕಾಗುತ್ತವೆ. ಆಗ 121 ಸದಸ್ಯರ ಬಲ ಹೊಂದಿರುವ ಬಿಜೆಪಿಯಲ್ಲಿ ಅಮಿತ್ ಶಾ ಮತ್ತು ಇರಾನಿ ಸುಲಭವಾಗಿ ಗೆಲ್ಲುತ್ತಾರೆ. ಇನ್ನು 33 ಮತಗಳು ಉಳಿಯುತ್ತವೆ. ಮೂರನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರಜಪೂತ್‌ಗೆ ಇನ್ನು 11 ಮತಗಳಷ್ಟೇ ಬೇಕು. ಆದರೆ, ಕಾಂಗ್ರೆಸ್‌ನಲ್ಲಿ ಇನ್ನು 49 ಶಾಸಕರಿದ್ದರೂ, ಇವರಲ್ಲಿ ಕೆಲವರು ಪಕ್ಷ ತೊರೆಯುವ ಸಾಧ್ಯತೆಯಿದೆ. ಅಲ್ಲದೆ, ಕೆಲವರು ಅಡ್ಡ ಮತದಾನ ಮಾಡುವ ಆತಂಕವೂ ಇದೆ. ಹೀಗಾಗಿ, ಕಾಂಗ್ರೆಸ್‌ನ ಅಹ್ಮದ್ ಪಟೇಲ್ ಅವರ ಗೆಲುವು ಕಷ್ಟಸಾಧ್ಯ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.