ಗೋವಾ : ಕರ್ನಾಟಕ ಮೂಲದ ಒಂದೇ ಕುಟುಂಬದ ಮೂವರು ನೇಣಿಗೆ ಶರಣು
Team Udayavani, Jun 30, 2021, 2:18 PM IST
ಪಣಜಿ(ವಾಸ್ಕೊ): ಕರ್ನಾಟಕ ಮೂಲದ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಸ್ಕೊ ಜುವಾರಿನಗರ ಬಿರ್ಲಾದಲ್ಲಿ ನಡೆದಿದೆ.
ದಕ್ಷಿಣ ಗೋವಾ ಪೋಲಿಸ್ ಅಧೀಕ್ಷಕ ಪಂಕಜ್ ಕುಮಾರ್ ಸಿಂಗ್ ರವರು ನೀಡಿರುವ ಮಾಹಿತಿಯ ಅನುಸಾರ- ಜುವಾರಿನಗರ ಬಿರ್ಲಾದಲ್ಲಿ ಬಾಡಿಕೆ ಮನೆಯಲ್ಲಿ ವಾಸಿಸುತ್ತಿದ್ದ ಹುಲಗೆಪ್ಪಾ ಅಂಬಿಗೇರ (35), ಈತನ ಸಹೋದರ ಗಂಗಪ್ಪಾ ಅಂಬಿಗೇರ(29), ಪತ್ನಿ ದೇವಮ್ಮಾ ಹುಲಗೆಪ್ಪಾ ಅಂಬಿಗೇರ( 28) ಈ ಮೂವರು ಮನೆಯಲ್ಲಿ ನೇಣುಬಿಗಿದ ಅವಸ್ಥೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ವೆರ್ಣಾ ಪೋಲಿಸ್ ನಿರೀಕ್ಷಕರು ಮತ್ತು ವಾಸ್ಕೊ ಉಪವಿಭಾಗ ಅಧೀಕ್ಷಕರು ಘಟನಾ ಸ್ಥಳಕ್ಕೆ ದಾಖಲಾಗಿ ಪಂಚನಾಮೆ ನಡೆಸಿದರು. ನಂತರ ಮೃತದೇಹವನ್ನು ಗೋವಾ ವೈದ್ಯಕೀಯ ಲಾಲೇಜಿಗೆ ಕಳುಹಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿ – ಈ ಮೂವರೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ವೆರ್ಣಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಾಸ್ಕೊದಲ್ಲಿ ಕಳೆದ ವಾರ ಮನೆಯೊಂದರಲ್ಲಿ 10 ಲಕ್ಷ ರೂ ಮೌಲ್ಯದ ಆಭರಣ ಕಳವು ಪ್ರಕರಣದಲ್ಲಿ ಪೋಲಿಸರು ಈ ಮೂವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದರು ಎನ್ನಲಾಗಿದೆ. ಇದರಿಂದಾಗಿ ಮನನೊಂದು ಈ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.