ಭಾರತಕ್ಕೆ ಮೂರು ರಫೇಲ್ ಯುದ್ಧ ವಿಮಾನ ಹಸ್ತಾಂತರ
Team Udayavani, Nov 22, 2019, 7:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಭಾರತ ಸರಕಾರದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಫ್ರಾನ್ಸ್ನ ಡಸ್ಸಾಲ್ಟ್ ಯುದ್ಧ ವಿಮಾನ ತಯಾರಿಕೆ ಕಂಪೆನಿ ತನ್ನ ಮೊದಲ ಕಂತಿನ ಮೂರು ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ. ಈ ಯುದ್ಧ ವಿಮಾನಗಳನ್ನು ಭಾರತದ ಪೈಲಟ್ಗಳು, ತಂತ್ರಜ್ಞರ ತರಬೇತಿಗೆ ಬಳಸಿಕೊಳ್ಳಲಾಗುವುದು ವಾಯುಪಡೆ ಮೂಲಗಳು ತಿಳಿಸಿವೆ.
ಅ.8ರಂದು ಮೊದಲ ರಫೇಲ್ ಯುದ್ಧವಿಮಾನವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಫ್ರಾನ್ಸ್ನಲ್ಲಿ ಸ್ವೀಕರಿಸಿದ್ದರು. ಮುಂದಿನ 2020 ಮೇ ಒಳಗಾಗಿ ಮೊದಲ ಬ್ಯಾಚ್ನ ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬರಲಿವೆ.
2016ರಲ್ಲಿ 36 ರಫೇಲ್ ಯುದ್ಧ ವಿಮಾನ ಪೂರೈಕೆಗೆ ಭಾರತ ಸರಕಾರ ಫ್ರಾನ್ಸ್ ಜತೆಗೆ 59 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಕ್ಕೆ ಸಹಿ ಹಾಕಿತ್ತು. ಸುಪ್ರೀಂಕೋರ್ಟ್ ರಫೇಲ್ ಅವ್ಯವಹಾರ ಕುರಿತ ಅರ್ಜಿಯನ್ನು ತಳ್ಳಿ ಹಾಕಿದ ಬೆನ್ನಲ್ಲೇ, ರಫೇಲ್ ಹಸ್ತಾಂತರವಾದ ಸುದ್ದಿಯೂ ಹೊರಬಿದ್ದಿದೆ. ಆದರೆ ಈ ಎರಡು ರಫೇಲ್ ಯುದ್ಧ ವಿಮಾನಗಳು ಹಸ್ತಾಂತರವಾದ ನಿರ್ದಿಷ್ಟ ದಿನಾಂಕವನ್ನು ಕೇಂದ್ರ ಸರಕಾರ ಬಹಿರಂಗಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.