Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Team Udayavani, Dec 26, 2024, 4:56 PM IST
ರಾಜಸ್ಥಾನ: ಕಳೆದ ನಾಲ್ಕು ದಿನಗಳ ಹಿಂದೆ 700 ಅಡಿ ಆಳದ ತೆರೆದ ಕೊಳೆವೆ ಬಾವಿಗೆ ಬಿದ್ದ ಮೂರೂ ವರ್ಷದ ಬಾಲಕಿಯ ರಕ್ಷಣಾ ಕಾರ್ಯಾಚರಣೆ ಗುರುವಾರವೂ(ಡಿ.26) ಮುಂದುವರೆದಿದ್ದು ಬಾಲಕಿ 150 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿ 70 ಗಂಟೆಗಳಾಗಿವೆ.
ಕಳೆದ ಸೋಮವಾರ(ಡಿ.23) ಮೂರು ವರ್ಷದ ಬಾಲಕಿ ತನ್ನ ತಂದೆಯ ಜೊತೆಯಲ್ಲಿ ಜಮೀನಿಗೆ ಹೋದ ವೇಳೆ ಆಟವಾಡುತ್ತಿರುವ ವೇಳೆ ಸುಮಾರು 700 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದೆ ಘಟನೆ ನಡೆದ ಬಳಿಕ ಬಾಲಕಿಯ ರಕ್ಷಣಾ ಕಾರ್ಯಾಚರಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ, ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಬಾಲಕಿಯನ್ನು ಸುರಕ್ಷಿತವಾಗಿ ಹೊರತರಲು ಅವಿರತ ಶ್ರಮಿಸುತ್ತಿದೆ ಆದರೆ ಇಂದಿಗೆ ನಾಲ್ಕು ದಿನಗಳು ಕಳೆದಿದ್ದು ಬಾಲಕಿಯ ಸ್ಥಿತಿ ಹದಗೆಡುತ್ತಿದೆ ಬಾಲಕಿಗೆ ಪೈಪ್ ಮೂಲಕ ಆಕ್ಸಿಜನ್ ವ್ಯವಸ್ಥೆಯನ್ನು ಮಾಡಲಾಗಿದೆ ಸದ್ಯ ಕೊಳವೆ ಬಾವಿಗೆ ಸಮಾನಾಂತರವಾಗಿ ಸುರಂಗ ಕೊರೆಯುವ ಕಾರ್ಯ ನಡೆಯುತ್ತಿದ್ದು ಇಂದಿಗೆ ಕಾರ್ಯಾಚರಣೆ ಪೂರ್ಣಗೊಳಿಸುವ ವಿಶ್ವಾಸವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಒಂದೆಡೆ ಬಾಲಕಿಯ ಚಲನ ವಲನವನ್ನು ಕ್ಯಾಮೆರಾ ಮೂಲಕ ಅಧಿಕಾರಿಗಳು ಗಮನಿಸುತ್ತಿದ್ದಾರೆ, ಇನ್ನು ಬುಧವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡದ ಸಿಬ್ಬಂದಿ ಹುಕ್ ನ ಸಹಾಯದಿಂದ ಬಾಲಕಿಯನ್ನು ಸುಮಾರು 30 ಅಡಿ ಮೇಲಕ್ಕೆ ಎಳೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಎನ್‌ಡಿಆರ್‌ಎಫ್ ತಂಡದ ಉಸ್ತುವಾರಿ ಯೋಗೇಶ್ ಕುಮಾರ್ ಮೀನಾ, ಸಿಕ್ಕಿಬಿದ್ದ ಬಾಲಕಿಯನ್ನು ತಲುಪಲು ಇನ್ನೂ 170 ಮೀಟರ್ ಆಳಕ್ಕೆ ಅಗೆಯಬೇಕಿದೆ. ಇನ್ನು ಕೆಲವು ಅಡಿಗಳಷ್ಟೇ ಬಾಕಿ ಉಳಿದಿದೆ ಎಂದು ಹೇಳಿದ್ದಾರೆ ಜೊತೆಗೆ ಘಟನೆ ನಡೆದ ದಿನದಿಂದ ಜಿಲ್ಲಾ ಆಡಳಿತ ಮತ್ತು ವೈದ್ಯಕೀಯ ಸಿಬ್ಬಂದಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಬಾಲಕಿ ಸುರಕ್ಷಿತವಾಗಿ ಬದುಕಿ ಬರಲಿ ಎಂಬುದೇ ಎಲ್ಲರ ಪ್ರಾರ್ಥನೆ..
ಇದನ್ನೂ ಓದಿ: Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.