ಕತ್ತು ಸೀಳಿದ ಗಾಳಿಪಟದ ದಾರ;ಸ್ಕೂಟರ್ ಸವಾರೆಯಾಗಿದ್ದ ವೈದ್ಯೆ ದುರ್ಮರಣ
Team Udayavani, Oct 9, 2018, 12:47 PM IST
ಪುಣೆ: ಗಾಳಿ ಪಟದ ಚೈನಾ ಮಾಂಜಾ ದಾರ ಕತ್ತು ಸೀಳಿದ ಪರಿಣಾಮ ಫ್ಲೈಓವರ್‌ನಲ್ಲಿ ಸ್ಕೂಟರ್ ಸವಾರೆಯಾಗಿ ತೆರಳುತ್ತಿದ್ದ ಯುವ ವೈದ್ಯೆ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಬೋಸಾರಿ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ.
26 ರ ಹರೆಯದ ಆಯುರ್ವೇದ ವೈದ್ಯೆ ಕೃಪಾಲಿ ನಿಕ್ಕಂ ಅವರು ಮೃತ ದುರ್‌ದೈವಿ. ಹಾರಾಡುತ್ತಿದ್ದ ಗಾಳಿಪಟದ ಮಾಂಜಾ ದಾರ ಕತ್ತನ್ನು ಸೀಳಿದ ಪರಿಣಾಮ ಏಕಾಏಕಿ ಸ್ಕೂಟರ್‌ನಿಂದ ಕುಸಿದು ಬಿದ್ದಿದ್ದಾರೆ. ಕತ್ತಿನ ಭಾಗದಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ಆಕೆ ಮಾತನಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
20 ನಿಮಿಷಗಳ ಕಾಲ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಯಾವುದೇ ವಾಹನಗಳು ಲಭ್ಯವಾಗಲಿಲ್ಲ. ಆ ಬಳಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಗಾಜು, ಲೋಹದ ತುಣುಕು, ಬಳೆಚೂರುಗಳನ್ನು ನಯವಾಗಿ ಪುಡಿಮಾಡಿ ದಾರಕ್ಕೆ ಲೇಪನ ಮಾಡಿ ಚೈನಾ ಮಾಂಜಾ ಹೆಸರಿನಲ್ಲಿ ಗಾಳಿಪಟದ ದಾರವನ್ನಾಗಿ ಬಳಸಲಾಗುತ್ತದೆ. ಇದು ಮಾರಕವಾಗಿದ್ದು ಸಾವಿರಾರು ಪಕ್ಷಿಗಳು ಸಾವನ್ನಪ್ಪಿವೆ. ಹಲವರಿಗೆ ಗಾಯಗಳೂ ಆಗಿದ್ದವು. ನಿಷೇಧವಿದ್ದರೂ ಚೈನಾ ಮಾಂಜಾ ದಾರಗಳ ಮಾರಾಟ ಮತ್ತು ಹಾರಾಟ ಎಗ್ಗಿಲ್ಲದೆ ಮುಂದುವರಿದಿರುವುದು ದುರಂತಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.