Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

ಸಿಎಂ ನಾಯ್ಡು ಮಾತ್ರ ಧ್ವನಿ ಎತ್ತಿದರು... ಕಠಿನ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಒತ್ತಾಯ

Team Udayavani, Sep 19, 2024, 7:49 PM IST

1-tirupati-laddu

ತಿರುಪತಿ: ಆಂಧ್ರಪ್ರದೇಶದ ಜಗತ್ಪಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ತಿರುಪತಿ ದೇಗುಲದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಪವಿತ್ರ ಲಡ್ದುಗಳಲ್ಲಿ(Tirupati laddoos) ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದನ್ನು ಲ್ಯಾಬ್ ವರದಿ ದೃಢಪಡಿಸಿದೆ.

ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (YSRCP) ಸರಕಾರ ತಿರುಪತಿ ಲಡ್ದು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಬೆನ್ನಲ್ಲೇ ಲ್ಯಾಬ್ ವರದಿ ದೃಢಪಟ್ಟಿದೆ. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿ ಪಕ್ಷ ಆರೋಪವನ್ನು ನಿರಾಕರಿಸಿದೆ.

ಈಗ, ಪಶು ಆಹಾರ ಮತ್ತು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯದ NDDB CALF ನ ವರದಿಯು ತಿರುಪತಿ ಲಡ್ದುಗಳನ್ನು ತಯಾರಿಸಲು ಬಳಸುವ ತುಪ್ಪದ ಮಾದರಿಗಳಲ್ಲಿ ತಾಳೆ ಎಣ್ಣೆ, ಮೀನಿನ ಎಣ್ಣೆ, ಬೀಫ್ ಟ್ಯಾಲೋ, ಹಂದಿಯ ಕೊಬ್ಬಿನ ಅಂಶ ಸೇರಿರುವುದನ್ನು ಬಹಿರಂಗಪಡಿಸಿದೆ.

ಚಂದ್ರಬಾಬು ನಾಯ್ಡು ಅವರ ಗಂಭೀರ ಆರೋಪದ ನಂತರ, ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಕೂಡ ಈ ವಿಷಯದ ಬಗ್ಗೆ ಜಗನ್ ಮೋಹನ್ ರೆಡ್ಡಿ ಅವರನ್ನು ಗುರಿಯಾಗಿಸಿದ್ದಾರೆ.

ಕಠಿನ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಒತ್ತಾಯ
ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬುದು ಗಂಭೀರ ವಿಷಯವಾಗಿದ್ದು ಭಾಗಿಯಾಗಿರುವವರ ವಿರುದ್ಧ ಕಠಿನ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.

ಆಂಧ್ರಪ್ರದೇಶದ ಹಿಂದಿನ ವೈಎಸ್‌ಆರ್ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು ಬಗ್ಗೆ ಎಲ್ಲರಿಗೂ ತಿಳಿದಿದೆ ಆದರೆ ಅದು ಈ ಮಟ್ಟಕ್ಕೆ ಕುಸಿಯಬಹುದು ಎಂದು ಯಾರೂ ನಿರೀಕ್ಷಿಸಿರಲಿಲ್ಲ ಎಂದು ವಿಎಚ್‌ಪಿ ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇದು ಬಹಳ ಗಂಭೀರವಾದ ವಿಷಯವಾಗಿದ್ದು, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊರತುಪಡಿಸಿ ಯಾರೂ ಧ್ವನಿ ಎತ್ತಲಿಲ್ಲ. ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿದವರನ್ನು ಶಿಕ್ಷಿಸಿ, ತಪ್ಪಿತಸ್ಥರ ವಿರುದ್ಧ ಶೀಘ್ರ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಬನ್ಸಾಲ್ ಹೇಳಿದ್ದಾರೆ.

ಸಾಮಾಜಿಕ ತಾಣಗಳಲ್ಲೂ ವ್ಯಾಪಕ ಆಕ್ರೋಶ
ಲ್ಯಾಬ್ ವರದಿ ಧೃಡವಾಗುತ್ತಿದ್ದಂತೆ ಸಾಮಾಜಿಕ ತಾಣಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ವಿರುದ್ಧ ಜನರು ಕಿಡಿ ಕಾರುತ್ತಿದ್ದಾರೆ.

ವರದಿಯಲ್ಲೇನಿದೆ?
ಜಾನುವಾರು, ಆಹಾರ ವಿಶ್ಲೇಷಣೆ ಮತ್ತು ಕಲಿಕಾ ಕೇಂದ್ರ(ಕಾಫ್) ದಿಂದ ಲಡ್ಡುವಿಗೆ ಬಳಸುವ ತುಪ್ಪದ ಮಾದರಿ ಪರೀಕ್ಷೆ
ತುಪ್ಪದಲ್ಲಿ ಮೀನಿನ ಎಣ್ಣೆ, ದನದ ಮಾಂಸದಿಂದ ತೆಗೆದ ಕೊಬ್ಬು ಪತ್ತೆ
ಹಂದಿಯ ಮಾಂಸದ ಪದರದಿಂದ ತೆಗೆದ ಘನ ಬಿಳಿ ಕೊಬ್ಬು ಸಹ ಪತ್ತೆ
ಜುಲೈ 9ರಂದು ಸಂಗ್ರಹವಾದ ಮಾದರಿ, ಜುಲೈ 16ರಂದು ವರದಿ ಪ್ರಕಟ
ವರದಿ ಬಗ್ಗೆ ಯಾವುದೇ ಸ್ಪಷ್ಟನೆ ನೀಡದ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.