Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!
Team Udayavani, Nov 2, 2024, 3:17 PM IST
ಹೈದರಾಬಾದ್: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಆಕೆಯ ಸಂಬಂಧಿಯೇ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಅದೇ ಕಾಲೋನಿಯಲ್ಲಿ ವಾಸವಿದ್ದ 22ರ ಹರೆಯದ ಆರೋಪಿ ಶುಕ್ರವಾರ (ನ.01) ಮಗುವಿಗೆ ಚಾಕಲೇಟ್ ಕೊಡಿಸಿ ಆಮಿಷವೊಡ್ಡಿ ಗದ್ದೆಗೆ ಕರೆದೊಯ್ದಿದ್ದ. ಆಕೆಯನ್ನು ಕೊಂದು ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ಪೋಷಕರು ಹುಡುಕಾಟ ಆರಂಭಿಸಿದ್ದರು. ಕೊನೆಗೆ ಆಕೆಯನ್ನು ಆರೋಪಿಯೊಂದಿಗೆ ನೋಡಿದ್ದಾಗಿ ಹೇಳಿಕೊಂಡು ಪೊಲೀಸ್ ದೂರು ದಾಖಲಿಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಲ್.ಸುಬ್ಬರಾಯುಡು ತಿಳಿಸಿದ್ದಾರೆ.
“ಆರೋಪಿ ಅನುಮಾನಾಸ್ಪದವಾಗಿ ವರ್ತಿಸಿದ. ನಾವು ವಿಚಾರಣೆ ನಡೆಸಿದಾಗ, ಆತ ಅಪರಾಧ ಒಪ್ಪಿಕೊಂಡ. ಆತ ಶಾಲೆಯ ಬಳಿಯ ತೆರೆದ ಮೈದಾನಕ್ಕೆ ಅವಳನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಂತರ ಅವನು ಆಕೆಯ ದೇಹವನ್ನು ಕೊಂದು ಹೊಲದಲ್ಲಿ ಹೂತು ಹಾಕಿದ್ದ” ಎಂದು ಎಸ್ಪಿ ಹೇಳಿದರು.
ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಂತ್ರಸ್ತೆಯ ತಾಯಿ ಆರೋಪಿಯನ್ನು ತನ್ನ ಸಹೋದರನಂತೆ ನೋಡಿಕೊಳ್ಳುತ್ತಿದ್ದಳು. ಆಗಾಗ ಅವರ ಮನೆಯಲ್ಲಿ ಸಮಯ ಕಳೆಯುತ್ತಿದ್ದರು ಮತ್ತು ಮಗುವಿನೊಂದಿಗೆ ಆಟವಾಡುತ್ತಿದ್ದರು ಎಂದು ಎಸ್ಪಿ ಹೇಳಿದ್ದಾರೆ.
“ಅವನು ಈ ರೀತಿ ಮಾಡುತ್ತಾನೆ ಎಂದು ಯಾರು ಅನುಮಾನಿಸುತ್ತಾರೆ? ಆತ ಕುಟುಂಬದ ಸದಸ್ಯರಂತೆ ಇದ್ದ” ಎಂದು ನೆರೆಹೊರೆಯವರು ಹೇಳಿದರು.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕುಟುಂಬಕ್ಕೆ 10 ಲಕ್ಷ ರೂ ಆರ್ಥಿಕ ನೆರವು ನೀಡಲು ಆದೇಶಿಸಿದ್ದಾರೆ. ನಾಳೆ ಗೃಹ ಸಚಿವೆ ಅನಿತಾ ವಂಗಲಪುಡಿ ಕುಟುಂಬವನ್ನು ಭೇಟಿ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.