ಹೌರಾ ಟಿಎಂಸಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
Team Udayavani, Jun 5, 2018, 12:26 PM IST
ಹೌರಾ, ಪಶ್ಚಿಮ ಬಂಗಾಲ : ಹೌರಾ ಜಿಲ್ಲೆಯಲ್ಲಿಂದು ಓರ್ವ ಸ್ಥಳೀಯ ಟಿಎಂಸಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಸಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹೌರಾ ಜಿಲ್ಲೆಯ ಬಗ್ನಾನ್ ಪ್ರದೇಶದ ಬೂತ್ ಮಟ್ಟದ ಕಾರ್ಯದರ್ಶಿಯಾಗಿರುವ ಟಿಎಂಸಿ ಯ ಮೊಹಮ್ಮದ್ ಮೊಹಿಸಿನ್ ಖಾನ್ ಅವರು ನಿನ್ನೆ ರಾತ್ರಿ ತಮ್ಮ ಮನೆಗೆ ಮರಳುತ್ತಿದ್ದಾಗ ಅವರನ್ನು ಜಿಲ್ಲೆಯ ಹತೂರಿಯಾ ಗ್ರಾಮದಲ್ಲಿ ಗುಂಡಿಕ್ಕಿ ಕೊಂದರು. ಮೃತ ಖಾನ್ ಅವರ ಪತ್ನಿ ಟಿಎಂಸಿ ಗ್ರಾಮ ಪಂಚಾಯತ್ ಸದಸ್ಯೆಯಾಗಿದ್ದಾರೆ.
ಈ ಘಟನೆಯನ್ನು ಅನುಸರಿಸಿ ಗ್ರಾಮಸ್ಥರು ಖಾನ್ ಹಂತಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಹತೂರಿಯಾ ಗ್ರಾಮಕ್ಕೆ ಸಮೀಪದ ಎನ್ಎಚ್ 6ರಲ್ಲಿ ಸುಮಾರು ಎರಡು ತಾಸುಗಳ ಕಾಲ ರಾತ್ರಿ ವಾಹನ ಸಂಚಾರಕ್ಕೆ ತಡೆಯೊಡ್ಡಿದರು.
ಖಾನ್ ಕೊಲೆಗೆ ಸಂಬಂಧಿಸಿ ತಾವು ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.