ಗಂಗಾ ಎಕ್ಸ್ಪೆ‹ಸ್ ನಿರ್ಮಾಣಕ್ಕೆ ಅಸ್ತು
Team Udayavani, Jan 30, 2019, 12:50 AM IST
ಅಲಹಾಬಾದ್: ಮಹದೋದ್ದೇಶದ 600 ಕಿ.ಮೀ. ವ್ಯಾಪ್ತಿಯ ಗಂಗಾ ಎಕ್ಸ್ ಪ್ರಸ್ ಹೆದ್ದಾರಿ ನಿರ್ಮಾಣಕ್ಕೆ ಉತ್ತರ ಪ್ರದೇಶ ಸಂಪುಟ ಮಂಗಳವಾರ ಸಮ್ಮತಿ ನೀಡಿದೆ. ಕುಂಭಮೇಳ ನಡೆಯುತ್ತಿರುವ ಗಂಗಾ- ಯಮುನಾ-ಸರಸ್ವತಿ ನದಿಗಳ ಸಮ್ಮಿಲನ ಸ್ಥಳದಲ್ಲಿ ಮಂಗಳವಾರ ನಡೆಸಲಾದ ವಿಶೇಷ ಸಂಪುಟ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದೆ.
ಅನೇಕ ಸಾಧು, ಸಂತರ ಜತೆಯಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಸಂಪುಟದ 25 ಸಚಿವರು ಗಂಗೆಯಲ್ಲಿ ಮುಳುಗೆದ್ದು ಬಂದರಲ್ಲದೆ, ಪೂಜೆ ನೆರವೇರಿಸಿ ಸಂಪುಟ ಸಭೆ ನಡೆಸಿದ್ದು ವಿಶೇಷವಾಗಿತ್ತು. ಸಭೆಯ ನಂತರ ಮಾತನಾಡಿದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “”36,000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗಂಗಾ ಎಕ್ಸ್ ಪ್ರಸ್, ಇಡೀ ವಿಶ್ವದಲ್ಲೇ ಅತಿ ಉದ್ದದ ಹೆದ್ದಾರಿ ಆಗಲಿದೆ. ಇದರ ಜತೆಗೆ, ಬುಂದೇಲ್ಖಂಡ್ ಎಕ್ಸ್ಪ್ರೆಸ್ ಹೆದ್ದಾರಿ (2296 ಕಿ.ಮೀ.) ಹಾಗೂ ಪೂರ್ವಾಂಚಲ ಎಕ್ಸ್ಪ್ರೆಸ್ ವೇ (91 ಕಿ.ಮೀ.) ಕಾಮಗಾರಿಗಳಿಗೂ ಸಂಪುಟ ಒಪ್ಪಿಗೆ ಸೂಚಿಸಿದ್ದು, ಹಿಂದಿ ಚಿತ್ರ “ಉರಿ: ದ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕೆ ರಾಜ್ಯದಲ್ಲಿ ಜಿಎಸ್ಟಿಯಿಂದ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.