250 ಸ್ಥಾನಗಳಲ್ಲಷ್ಟೇ ಕಾಂಗ್ರೆಸ್ ಸ್ಪರ್ಧೆ?
Team Udayavani, Jun 17, 2018, 6:00 AM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಲೆ ತಪ್ಪಿಸುವ ಸಲುವಾಗಿ 2019ರಲ್ಲಿ ಕೇವಲ 250 ಸ್ಥಾನಗಳಲ್ಲಿ ಕಣಕ್ಕಿಳಿಯಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಉಳಿದ ಸ್ಥಾನಗಳನ್ನು ಇತರ ಪ್ರಾದೇಶಿಕ ಪಕ್ಷಗಳಿಗೆ ನೀಡಿ ಗೆದ್ದುಬರುವ ಇರಾದೆ ಹೊಂದಿದೆ. ಒಂದು ವೇಳೆ ಕಾಂಗ್ರೆಸ್ ಕೇವಲ 250 ಸ್ಥಾನಗಳಲ್ಲಿ ಮಾತ್ರ ಕಣಕ್ಕಿಳಿದರೆ ಸ್ವಾತಂತ್ರಾ ನಂತರ ಇದೇ ಮೊದಲ ಬಾರಿಗೆ ಈ ಪ್ರಮಾಣದ ಕಡಿಮೆ ಸ್ಥಾನದಲ್ಲಿ ಸ್ಪರ್ಧಿಸಿದಂತಾಗಲಿದೆ. ಮಾಜಿ ಸಚಿವ ಎ.ಕೆ.ಆ್ಯಂಟನಿ ನೇತೃತ್ವದ ಸಮಿತಿಯು ಈ ಬಗ್ಗೆ ಯೋಜನೆ ರೂಪಿಸಿದ್ದು, ಎಲ್ಲಾ ರಾಜ್ಯ ಮತ್ತು ಜಿಲ್ಲಾ ಘಟಕಗಳಿಂದ ಅಭಿಪ್ರಾಯ ಕೋರಿದೆ. ಈ ಘಟಕಗಳ ಅಭಿಪ್ರಾಯ ಕ್ರೋಢೀಕರಿಸಿ, ಅಧ್ಯಕ್ಷ ರಾಹುಲ್ ಗಾಂಧಿ ಜತೆ ಚರ್ಚಿಸಿದ ನಂತರ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ ಎಂದು “ಝೀ ನ್ಯೂಸ್’ ವರದಿ ಮಾಡಿದೆ.
ಕ್ಲೀನ್ ಇಮೇಜ್ ಇರುವಂಥವರಿಗೆ ಟಿಕೆಟ್ ನೀಡುವ ಪ್ರಸ್ತಾಪವನ್ನೂ ಆ್ಯಂಟನಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.