ಚಂಡೀಗಢ : ಒಂದೂವರೆ ವರ್ಷದ ಬಾಲಕ ಬೀದಿ ನಾಯಿಗಳ ದಾಳಿಗೆ ಬಲಿ
Team Udayavani, Jun 18, 2018, 11:47 AM IST
ಚಂಡೀಗಢ : ಇಲ್ಲಿನ ಪಾರ್ಕ್ ಒಂದರಲ್ಲಿ ಬೀದಿ ನಾಯಿಗಳು ಒಂದೂವರೆ ವರ್ಷ ಪ್ರಾಯದ ಬಾಲಕನ ಮೇಲೆ ದಾಳಿ ನಡೆಸಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.
ಮನೆಗೆಲಸದವಳಾಗಿರುವ ಮಗುವಿನ ತಾಯಿ ಮಗುವನ್ನು ಪಾರ್ಕ್‌ನಲ್ಲಿ ಬಿಟ್ಟು ಅಲ್ಲೇ ಸಮೀಪದಲ್ಲಿ ತಾನು ಕೆಲಸಮಾಡಿಕೊಂಡಿರುವ ಮನೆಗೆ ಪಾತ್ರೆ ತೊಳೆಯಲೆಂದು ಹೋಗಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ.
ಮಗು ಇತರ ಮೂವರೊಂದಿಗೆ ಪಾರ್ಕ್‌ನಲ್ಲಿ ಆಟವಾಡಿಕೊಂಡಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದವು; ಆಗ ಮಗುವಿನೊಂದಿಗಿದ್ದ ಇತರ ಬಾಲಕರು ಅಲ್ಲಿಂದ ಓಡಿ ಹೋದರು. ಒಂದೂವರೆ ವರ್ಷದ ಬಾಲಕನಿಗೆ ಹಾಗೆ ಮಾಡಲು ಸಾಧ್ಯವಾಗಲಿಲ್ಲ.
ಬೀದಿ ನಾಯಿಗಳ ದಾಳಿಗೆ ಗುರಿಯಾಗಿ ತೀವ್ರಗಾಯಗೊಂಡ ಬಾಲಕನನ್ನು ಅನಂತರ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅದಾಗಲೇ ಆತ ಮೃತಪಟ್ಟಿದ್ದುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿರುವ ಬಗ್ಗೆ ಸ್ಥಳೀಯರು ಸ್ಥಳೀಯಾಡಳಿತೆಗೆ ಬಹಳ ಹಿಂದೆಯೇ ದೂರಿದ್ದರು; ಆದರೆ ಏನೂ ಪ್ರಯೋಜನವಾಗಿರಲಿಲ್ಲ; ಜನರು ತಮ್ಮ ಮಕ್ಕಳನ್ನು ಇಲ್ಲಿನ ಪಾರ್ಕಿಗೆ ಕಳುಹಿಸಲು ಹೆದರುತ್ತಿದ್ದರು. ಅನೇಕರು ಇಲ್ಲಿ ಬೀದಿ ನಾಯಿಗಳ ದಾಳಿಗೆ ಗುರಿಯಾದ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.