![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, May 28, 2023, 4:33 PM IST
ಹೊಸದಿಲ್ಲಿ : ಒಲಿಂಪಿಕ್ ಪದಕ ವಿಜೇತರು ಸೇರಿದಂತೆ ಹಲವಾರು ಕುಸ್ತಿಪಟುಗಳು ಮತ್ತು ಅವರ ಹತ್ತಾರು ಬೆಂಬಲಿಗರು ಭಾನುವಾರ ನವದೆಹಲಿಯ ಹೊಸ ಸಂಸತ್ ಭವನದತ್ತ ಮೆರವಣಿಗೆ ಮಾಡಲು ಪ್ರಯತ್ನಿಸುತ್ತಿದ್ದಾಗ ದೆಹಲಿ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ.
ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳ ಗುಂಪು ಕಳೆದ ತಿಂಗಳಿನಿಂದ ಧರಣಿ ನಡೆಸುತ್ತಿದೆ.
ಕುಸ್ತಿಪಟುಗಳು ಭಾರತದ ಹೊಸ ಸಂಸತ್ತನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುತ್ತಿದ್ದಂತೆ ಮೆರವಣಿಗೆ ಮಾಡಲು ಪ್ರಯತ್ನಿಸಿದರು ಆದರೆ ನೂರಾರು ಪೊಲೀಸ್ ಸಿಬಂದಿ ಎಲ್ಲರನ್ನು ತಡೆದರು ವಶಕ್ಕೆ ಪಡೆದುಕೊಂಡವರಲ್ಲಿ ಒಲಂಪಿಕ್ ಕಂಚಿನ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದ್ದಾರೆ.
“ಅವರು ಬ್ಯಾರಿಕೇಡ್‌ಗಳನ್ನು ಮುರಿದರು ಮತ್ತು ಪೊಲೀಸರು ನೀಡಿದ ನಿರ್ದೇಶನಗಳನ್ನು ಅನುಸರಿಸಲಿಲ್ಲ. ಕಾನೂನನ್ನು ಉಲ್ಲಂಘಿಸಿದ್ದಾರೆ, ಆದ್ದರಿಂದ ಅವರನ್ನು ಬಂಧಿಸಲಾಯಿತು ”ಎಂದು ದೆಹಲಿ ಪೊಲೀಸ್ ವಿಶೇಷ ಕಾನೂನು ಮತ್ತು ಸುವ್ಯವಸ್ಥೆ ಅಧಿಕಾರಿ ದೇವೇಂದ್ರ ಪಾಠಕ್ ಹೇಳಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.