ತಮಿಳುನಾಡು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಮುಂದುವರಿದ ಮಳೆ: 23 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ; ಮಾಸಾಂತ್ಯದವರೆಗೂ ಮಳೆಗಿಲ್ಲ ಬಿಡುವು
Team Udayavani, Nov 28, 2021, 5:50 AM IST
ಚೆನ್ನೈ:ತಮಿಳುನಾಡು ಮತ್ತೆ “ಮಳೆ’ನಾಡಾಗಿ ಪರಿವರ್ತನೆಗೊಂಡಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಎರಡು ದಿನಗಳಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವೆಂಬಂತೆ, ತಿರುವಳ್ಳುವರ್, ಕಂಚೀಪುರಂ, ಚೆಂಗಲ್‌ಪಟ್ಟು, ತಿರುನಲ್ವೇಲಿ, ರಾಮನಾಥಪುರಂ, ನಾಗಪಟ್ಟಿಣಂ ಸೇರಿದಂತೆ ಹಲವೆಡೆ ನಿರಂತರ ಮಳೆಯಾಗುತ್ತಿದೆ.
ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. 23 ಜಿಲ್ಲೆಗಳಲ್ಲಿ ಎಲ್ಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶನಿವಾರ 220 ಪ್ರದೇಶಗಳು ಜಲಾವೃತಗೊಂಡಿದ್ದು, ನಗರದ 127 ಪ್ರದೇಶಗಳಲ್ಲಿ ಪಂಪ್‌ಗ್ಳ ಮೂಲಕ ಪ್ರವಾಹದ ನೀರನ್ನು ಹೊರಬಿಡುವ ಕೆಲಸ ನಡೆಯುತ್ತಿದೆ ಎಂದು ತಮಿಳುನಾಡು ವಿಪತ್ತು ನಿರ್ವಹಣಾ ಸಚಿವ ರಾಮಚಂದ್ರನ್ ಹೇಳಿದ್ದಾರೆ.
ಇದನ್ನೂ ಓದಿ:ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ
ಮೀನುಗಾರರಿಗೆ ಸೂಚನೆ:
ತಮಿಳುನಾಡಿನ ದಕ್ಷಿಣ ಕರಾವಳಿ, ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಕಾರಣ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಧಾರಾಕಾರ ಮಳೆಯಿಂದಾಗಿ ವ್ಯಾಪಕ ಪ್ರಮಾಣದ ಬೆಳೆಹಾನಿಯಾಗಿದ್ದು, ನೂರಾರು ಮರಗಳು ಧರೆಗುರುಳಿವೆ. ಮಳೆಯಿಂದಾಗಿ ಚೆನ್ನೈನ ಬಹುತೇಕ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ತ.ನಾಡು ಮಾತ್ರವಲ್ಲದೇ ರಾಯಲಸೀಮಾ ಪ್ರದೇಶ, ಯಾನಮ್ ಸೇರಿದಂತೆ ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲೂ ನ.27 ಮತ್ತು 28ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ, ನ.29ರಂದು ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಹೊಸದಾಗಿ ವಾಯುಭಾರ ಕುಸಿತ ಉಂಟಾಗಲಿದ್ದು, ನಂತರದ 48 ಗಂಟೆಗಳ ಕಾಲ ಅದು ಪಶ್ಚಿಮ-ವಾಯವ್ಯದಿಕ್ಕಿನತ್ತ ಸಂಚರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಂಚನೆಗೀಡಾಗಿ ಪಾಕ್ ಸೇರಿದ್ದ ಭಾರತದ ಮಹಿಳೆ 22 ವರ್ಷ ಬಳಿಕ ಸ್ವದೇಶಕ್ಕೆ
PM Modi: ಕಾಂಗ್ರೆಸ್ ರೈತರಿಗೆ ತಾನೂ ಒಳಿತು ಮಾಡದು ಬೇರೆ ಅವರಿಗೂ ಬಿಡದು
Coimbatore ಸರಣಿ ಸ್ಫೋಟದ ರೂವಾರಿ ಎಸ್.ಎ.ಬಾಷಾ ಸಾವು
Supreme Court: ಅಲ್ಲು ಅರ್ಜುನ್‌ಗೆ ಹೊಸ ಸಂಕಷ್ಟ: ಬೇಲ್ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ?
Panaji: ಡಿ.19 ರಂದು ಮುಕ್ತಿ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರಿಗೆ ಸನ್ಮಾನ, ಗೌರವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.