ಆಂಧ್ರಕ್ಕೆ ಪ್ರವಾಸೋದ್ಯಮ ಪ್ರಶಸ್ತಿ
ಪ್ರಶಸ್ತಿ ಪ್ರದಾನ ಮಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
Team Udayavani, Sep 28, 2019, 5:35 AM IST
ಹೊಸದಿಲ್ಲಿ: ವಿಶ್ವ ಪ್ರವಾಸೋದ್ಯಮ ದಿನದ ಹಿನ್ನೆಲೆಯಲ್ಲಿ 2017-18ರ ರಾಷ್ಟ್ರೀಯ ಪ್ರವಾಸೋದ್ಯಮ ಪುರಸ್ಕಾರವನ್ನು ಆಂಧ್ರ ಪ್ರದೇಶ ಪಡೆದುಕೊಂಡಿದ್ದು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಈ ಪ್ರಶಸ್ತಿ ಪ್ರದಾನ ಮಾಡಿದರು. ಪ್ರವಾಸೋದ್ಯಮದಲ್ಲಿ ಹಿಂದೊಮ್ಮೆ ಕಪ್ಪು ಪಟ್ಟಿಗೆ ಸೇರಿದ್ದ ಭಾರತ ಈಗ ಕೆಂಪು ಹಾಸು ಹಾಸಿ ಪ್ರವಾಸಿಗರನ್ನು ಸ್ವಾಗತಿಸುತ್ತಿದೆ ಎಂದಿದ್ದಾರೆ. ಅಲ್ಲದೆ, ಪ್ರವಾಸೋದ್ಯಮದಲ್ಲಿ ತೊಡಗಿಸಿ ಕೊಂಡಿ ರುವವರು ಪರಿಸರ ಕಾಳಜಿ ರೂಢಿಸಿಕೊಳ್ಳ ಬೇಕು. ಜವಾಬ್ದಾರಿಯುತ, ಸುಸ್ಥಿರ ಪ್ರವಾ ಸೋದ್ಯಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳ ಬೇಕು ಎಂದು ಕರೆ ನೀಡಿದ್ದಾರೆ.
ಒಟ್ಟು 76 ಪ್ರಶಸ್ತಿ ನೀಡಲಾಗಿದ್ದು, ವಿವಿಧ ವಿಭಾಗಗಳಲ್ಲಿ ಹಲವು ರಾಜ್ಯಗಳು, ಸಂಸ್ಥೆ ಗಳನ್ನು ಪುರಸ್ಕರಿಸಲಾಗಿದೆ. ಗೋವಾ ಮತ್ತು ಮಧ್ಯಪ್ರದೇಶ ಸಾಹಸ ಪ್ರವಾ ಸೋದ್ಯಮ ವಿಭಾಗದಲ್ಲಿ ಜಂಟಿ ವಿಜೇತ ರಾಗಿವೆ. ಉತ್ತಮ ಸಿನೆಮಾ ಪ್ರಚಾರ ಸ್ನೇಹಿ ರಾಜ್ಯ ವಿಭಾಗದಲ್ಲಿ ಉತ್ತರಾಖಂಡ ಮೊದಲ ಸ್ಥಾನ ಪಡೆದಿದೆ. ಮಾಹಿತಿ ತಂತ್ರಜ್ಞಾನ ಬಳಕೆ ಯಲ್ಲಿ ತೆಲಂಗಾಣ ಮೊದಲ ಸ್ಥಾನ ದಲ್ಲಿದ್ದರೆ, ಐಟಿಡಿಸಿಯ ದಿ ಅಶೋಕ್ ಹೊಟೇಲ್ “ಉತ್ತಮ ಹೊಟೇಲ್’ ಪುರಸ್ಕಾರ ಪಡೆದಿದೆ.
ಸಂಕಷ್ಟಕ್ಕೆ ಸಿಲುಕಿದೆ ಪ್ರವಾಸಿಗರಿಗೆ ನೆರವು ನೀಡುವ ವ್ಯಕ್ತಿಗಳಿಗೆ ಮುಂದಿನ ವರ್ಷದಿಂದ ವಿಶೇಷ ಪ್ರಶಸ್ತಿ ನೀಡುವುದಾಗಿ ಪ್ರವಾ ಸೋದ್ಯಮ ಖಾತೆ ರಾಜ್ಯ ಸಚಿವ ಪ್ರಹ್ಲಾದ್ ಪಟೇಲ್ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.