ಕೋವಿಡ್ ನಿಯಂತ್ರಣಕ್ಕೆ ‘ಟೆಸ್ಟ್, ಟ್ರ್ಯಾಕಿಂಗ್,ಟ್ರೀಟ್’ ಹೊರತಾಗಿ ಬೇರೆ ಪರ್ಯಾಯವಿಲ್ಲ: ಮೋದಿ
Team Udayavani, Apr 18, 2021, 4:31 PM IST
ವಾರಣಾಸಿ : ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಏಪ್ರಿಲ್ 18) ಉತ್ತರಪ್ರದೇಶದ ವಾರಣಾಸಿಯ ಲೋಕಸಭಾ ಕ್ಷೇತ್ರದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ನಡೆಸಿದ್ದಾರೆ.
ವರ್ಚುವಲ್ ಮೀಟ್‌ನಲ್ಲಿ ಮಾತನಾಡಿದ ಪ್ರಧಾನಿ, ಕೋವಿಡ್ -19 ಬಿಕ್ಕಟ್ಟಿನ ಎರಡನೇ ಅಲೆಯನ್ನು ನಿವಾರಿಸುವ ಏಕೈಕ ಮಾರ್ಗವೆಂದರೆ ಟೆಸ್ಟ್, ಟ್ರ್ಯಾಕ್, ಮತ್ತು ಟ್ರೀಟ್ ಮಹತ್ವವನ್ನು ಒತ್ತಿ ಹೇಳಿದರು.
ಕೋವಿಡ್ ನಿಯಮವಾಳಿಗಳಾದ ಸ್ಯಾನಿಟೈಸರ್ ಬಳಜಕೆ, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗ ಮಾಡಬೇಕು ಎಂದರು. ಇದಲ್ಲದೆ, ಒಂದು ವರ್ಷದಿಂದ ಇಡೀ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ದಣಿವರಿಯಿಲ್ಲದೆ ಕೆಲಸ ಮಾಡಿದ ವೈದ್ಯಕೀಯ ಸಿಬ್ಬಂದಿಗಳ ಪ್ರಯತ್ನಗಳನ್ನು ಅವರು ಶ್ಲಾಘಿಸಿದ್ದಾರೆ.
ಓದಿ : ಮಾಸ್ಕ್ ಹಾಕದೆ ವಾಗ್ವಾದ ಮಾಡಿದ ವ್ಯಾಪಾರಿಗೆ ಕಪಾಳಮೋಕ್ಷ
ಇನ್ನು, ಅಧಿಕಾರಿಗಳು ವಾರಣಾಸಿಯ ಕೋವಿಡ್ ಪರಿಸ್ಥಿತಿಯ ಬಗ್ಗೆ ಪ್ರಧಾನಿಯವರಿಗೆ ವಿವರಿಸಿದರು. ಐಸೋಲೇಶನ್ ಸೆಂಟರ್, ಬೆಡ್ ಲಭ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
ಕೋವಿಡ್ 19 ಪ್ರಕರಣಗಳು ದಾಖಲೆಯ ಗರಿಷ್ಠ ಮಟ್ಟಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವೆಂಟಿಲೇಟರ್ ಗಳು, ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆ ಮತ್ತು ಪೂರೈಕೆಯನ್ನು ನಿಭಾಯಿಸುವ ಸಿದ್ಧತೆಯನ್ನು ಶನಿವಾರ ಪ್ರಧಾನಿ ಪರಿಶೀಲಿಸಿದ್ದಾರೆ.
ಒಗ್ಗಟ್ಟಿನಿಂದ ಭಾರತವು ಕಳೆದ ವರ್ಷ ಕೋವಿಡ್ 19 ನನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು ಮತ್ತು ಭಾರತವು ಮತ್ತೆ ಅದೇ ತತ್ವಗಳೊಂದಿಗೆ ಕಾರ್ಯ ನಿರ್ವಹಿಸಬೇಕಿದೆ. “ಎಂದು ಅವರು ಹೇಳಿದ್ದಾರೆ.
‘ಟೆಸ್ಟ್, ಟ್ರ್ಯಾಕಿಂಗ್ ಮತ್ತು ಟ್ರೀಟ್’ಗೆ ಪರ್ಯಾಯ ವ್ಯವಸ್ಥೆ ಇಲ್ಲ ಮತ್ತು ಆರಂಭಿಕ ಪರೀಕ್ಷೆ ಮತ್ತು ಸರಿಯಾದ ಟ್ರ್ಯಾಕಿಂಗ್ ಮರಣ ಪ್ರಮಾಣವನ್ನು ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸಲಿದೆ ಎಂದು ಪಿಎಂ ಮೋದಿ ತಮ್ಮ ಹೇಳಿಕೆಯನ್ನು ಪ್ರಧಾನಿ ಪುನರುಚ್ಚರಿಸಿದ್ದಾರೆ.
ಇನ್ನು, ವರ್ಚುವಲ್ ಮೀಟಿಂಗ್ ನಲ್ಲಿ ಪ್ರಸ್ತಾಪಿಸಿದ ವಿಷಯವನ್ನು ಮೋದಿ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.
आज अपने संसदीय क्षेत्र वाराणसी में कोविड-19 के खिलाफ जंग में जुटे जनप्रतिनिधियों और अधिकारियों के साथ वीडियो कॉन्फ्रेंसिंग के जरिए चर्चा की। इस महामारी से प्रभावी तरीके से निपटने की तैयारियों के साथ-साथ बचाव एवं सुरक्षा संबंधी गतिविधियों की भी समीक्षा की।https://t.co/xjZKK1GWOU
— Narendra Modi (@narendramodi) April 18, 2021
ಓದಿ : ತಾಂತ್ರಿಕ ಸಲಹಾ ಸಮಿತಿಯ ಸಲಹೆ-ನಿರ್ದೇಶನ ಪಾಲಿಸುತ್ತೇವೆ: ಕಠಿಣ ನಿಯಮದ ಸೂಚನೆ ನೀಡಿದ ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.