Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Team Udayavani, Oct 6, 2024, 2:16 PM IST
ದೆಹಲಿ: ರಾಮಲೀಲಾ ಕಾರ್ಯಕ್ರಮದ ವೇಳೆ ಭಗವಾನ್ ರಾಮನ ಪಾತ್ರವನ್ನು ಹಾಕಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ(ಅ.5ರಂದು) ನಡೆದಿದೆ.
ದೆಹಲಿಯ ಶಹದಾರದಲ್ಲಿರುವ ಜೈ ಶ್ರೀರಾಮಲೀಲಾ ವಿಶ್ವಕರ್ಮ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಸುಶೀಲ್ ಕೌಶಿಕ್ (45) ಎಂದು ಗುರುತಿಸಲಾಗಿದ್ದು,ಇವರು ಪ್ರಾಪರ್ಟಿ ಡೀಲರ್ ಆಗಿದ್ದರು.
ರಾಮಲೀಲಾ ಕಾರ್ಯಕ್ರಮದಲ್ಲಿ ಇವರು ಭಗವಾನ್ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದರು. ಈ ವೇಳೆ ವೇದಿಕೆಯಲ್ಲಿ ಪಾತ್ರವನ್ನು ನಿಭಾಯಿಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆ ವೇದಿಕೆಯ ಬದಿಗೆ ಹೋಗಿದ್ದಾರೆ. ಬದಿಗೆ ಸರಿಯುತ್ತಿದ್ದಂತೆ ಅವರು ಅಲ್ಲೇ ಕುಸಿದು ಬಿದ್ದಿದ್ದಾರೆ.
One more sudden cardiac death in Delhi.
Sushil Kaushik died of cardiac arrest during a performance in Delhi.
He played the role of Ram in Shri Ramlila Committee Jhilmil, Delhi pic.twitter.com/m1dE40RIGV
— Hemant Rajaura (@hemantrajora_) October 6, 2024
ಇದಾದ ಬಳಿಕ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆದಾಗಲೇ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.
ಇದೇ ವರ್ಷದ ಜನವರಿಯಲ್ಲಿ, ಹರಿಯಾಣದ ಭಿವಾನಿಯ ರಾಮಲೀಲಾ ಕಾರ್ಯಕ್ರಮದಲ್ಲಿ ಹನುಮಾನ್ ಪಾತ್ರಧಾರಿ ಪ್ರದರ್ಶನದ ಮಧ್ಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದರು. ಅಕ್ಟೋಬರ್ 2022 ರಂದು ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದ ನಟರೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.