ಹಿಮಾಚಲ ಪ್ರದೇಶದ ಕಿನ್ನೋರ್ ಜಿಲ್ಲೆಯಲ್ಲಿ ಲಘು ಭೂಕಂಪ
Team Udayavani, Oct 22, 2018, 11:37 AM IST
ಶಿಮ್ಲಾ : ಹಿಮಾಚಲ ಪ್ರದೇಶದ ಕಿನ್ನೋರ್ ಜಿಲ್ಲೆಯಲ್ಲಿ ಇಂದು ಸೋಮವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಲಘು ಭೂಕಂಪ ಸಂಭವಿಸಿರುವುದಾಗಿ ವರದಿಯಾಗಿದೆ. ಆದರೆ ಯಾವುದೇ ಜೀವ ಹಾನಿ, ಸೊತ್ತು ನಾಶ – ನಷ್ಟ ಉಂಟಾದ ವರದಿಗಳು ಇಲ್ಲ.
ಬೆಳಗ್ಗೆ ಸುಮಾರು 9.11ರ ಹೊತ್ತಿಗೆ 3 ಅಂಕಗಳ ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಶಿಮ್ಲಾ ಹವಾಮಾನ ಇಲಾಖೆಯ ನಿರ್ದೇಶಕ ಮನಮೋಹನ್ ಸಿಂಗ್ ತಿಳಿಸಿದ್ದಾರೆ.
ಕಿನ್ನೋರ್ ಜಿಲ್ಲೆಯ ಈಶಾನ್ಯ ಭಾಗದಲ್ಲಿ ಐದು ಕಿ.ಮೀ. ಭೂಮಿಯಾಳದಲ್ಲಿ ಭೂಕಂಪವು ಕೇಂದ್ರೀಕೃತವಾಗಿತ್ತು. ಆಸುಪಾಸಿನ ಪ್ರದೇಶಗಳಲ್ಲೂ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ಸಿಂಗ್ ಹೇಳಿದರು.
ಹಿಮಾಚಲ ಪ್ರದೇಶದ ಪರ್ವತ ಪ್ರದೇಶಗಳ ಹೆಚ್ಚಿನೆಲ್ಲ ಭಾಗಗಳು ಗರಿಷ್ಠ ಭೂಕಂಪ ಸೂಕ್ಷ್ಮತೆಯ ವಲಯ ವ್ಯಾಪ್ತಿಗೆ ಒಳಪಡುತ್ತವೆ. ಈ ವಲಯದಲ್ಲಿ ಆಗೀಗ ಎಂಬಂತೆ ಲಘು ಭೂಕಂಪಗಳು ಸಂಭವಿಸುವುದು ಸಾಮಾನ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.