ತ್ರಿಪುರಾ ನೂತನ ಸಿಎಂ ಆಗಿ ಮಾಣಿಕ್ ಸಾಹಾ ಆಯ್ಕೆ : ಯಾರಿವರು ಮಾಣಿಕ್ ಸಾಹಾ?
Team Udayavani, May 14, 2022, 9:19 PM IST
ನವದೆಹಲಿ: ಗುಜರಾತ್, ಕರ್ನಾಟಕ ಮತ್ತು ಉತ್ತರಾಖಂಡದ ಬಳಿಕ ಬಿಜೆಪಿ ಹೈಕಮಾಂಡ್, ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರುವಂತೆಯೇ ಮತ್ತೊಬ್ಬ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದೆ.
ಈಗ ತ್ರಿಪುರಾ ಸರದಿ. ಇಲ್ಲಿ ಸಿಎಂ ಆಗಿದ್ದ ಬಿಪ್ಲವ್ ಕುಮಾರ್ ದೇವ್ ಅವರನ್ನು ದಿಢೀರನೇ ಬದಲಿಸಿರುವ ಬಿಜೆಪಿ ವರಿಷ್ಠರು, ಇವರ ಸ್ಥಾನಕ್ಕೆ ಕ್ಲೀನ್ ಇಮೇಜ್ ಮತ್ತು ದಂತ ವೈದ್ಯ ಮಾಣಿಕ್ ಸಾಹಾ ಅವರನ್ನು ಆಯ್ಕೆ ಮಾಡಿದ್ದಾರೆ.
2023ರ ಮಾರ್ಚ್‌ಗೆ ತ್ರಿಪುರಾದಲ್ಲೂ ವಿಧಾನಸಭೆ ಚುನಾವಣೆ ಇದೆ. 2020ರಲ್ಲಿ ತ್ರಿಪುರಾ ಬಿಜೆಪಿಯಲ್ಲಿಯೂ ಆಂತರಿಕ ಭಿನ್ನಮತ ತಲೆದೋರಿತ್ತು. ಬಿಪ್ಲವ್ ವಿರುದ್ಧ ಸಿಡಿದೆದ್ದಿದ್ದ ಸುದೀಪ್ ರಾಯ್ ಬರ್ಮನ್‌ರನ್ನು ಆರೋಗ್ಯ ಸಚಿವ ಸ್ಥಾನದಿಂದ ವಜಾ ಮಾಡಲಾಗಿತ್ತು. ಬಳಿಕ ರಾಯ್ ಬರ್ಮನ್ ಮತ್ತು ಆಶೀಶ್ ಕುಮಾರ್ ಸಾಹಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಇದಕ್ಕೂ ಮುನ್ನ ಆಶೀಸ್ ದಾಸ್ ಕೂಡ ಮುಖ್ಯಮಂತ್ರಿ ದೇವ್ ಬಗ್ಗೆ ಬಹಿರಂಗವಾಗಿಯೇ ಟೀಕೆ ಮಾಡಿದ್ದರು. ಇವರನ್ನು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿತ್ತು. ಅಲ್ಲದೆ, ಕೆಲವು ಬಿಜೆಪಿ ಹಿರಿಯ ನಾಯಕರು ದೇವ್ ವಿರುದ್ಧ ಅಸಮಾಧಾನಗೊಂಡಿದ್ದರಿಂದ ಅನಿವಾರ್ಯವಾಗಿ ಬದಲಿಸಲಾಗಿದೆ.
ಹಾಗೆಯೇ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಆಡಳಿತ ವಿರೋಧಿ ಅಲೆ ಕಾಣಿಸಿಕೊಳ್ಳಬಾರದು ಎಂಬ ಕಾರಣದಿಂದ ಬಿಪ್ಲವ್ ಅವರನ್ನು ಬದಲಾವಣೆ ಮಾಡಿದೆ. ವಿಶೇಷವೆಂದರೆ, ಉತ್ತರಾಖಂಡದಲ್ಲಿ ಈ ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯೂ ಆಗಿದೆ.
ಇದನ್ನೂ ಓದಿ : ಚಾಮರಾಜನಗರ : ಆನ್ ಲೈನ್ ವಂಚನೆ ಪ್ರಕರಣವನ್ನು ಭೇದಿಸಿದ ಸೈಬರ್ ಠಾಣಾ ಪೊಲೀಸರು
ಯಾರಿವರು ಮಾಣಿಕ್ ಸಾಹಾ?
ಸದ್ಯ ತ್ರಿಪುರಾ ರಾಜ್ಯ ಘಟಕದ ಅಧ್ಯಕ್ಷರಾಗಿರುವ ಮಾಣಿಕ್ ಸಾಹಾ ಅವರ ಬಗ್ಗೆ ಉತ್ತಮ ಅಭಿಪ್ರಾಯಗಳಿವೆ. ಅದರಲ್ಲೂ ಇವರ ಕ್ಲೀನ್ ಇಮೇಜ್ ಪಕ್ಷಕ್ಕೆ ಸಹಾಯಕವಾಗುವ ಸಾಧ್ಯತೆ ಇದೆ. ಹಾಗೆಯೇ ಅವರು ದಂತ ಸರ್ಜನ್ ಆಗಿದ್ದಾರೆ. 2016ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದ ಇವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳುಹಿಸಲಾಗಿತ್ತು. 2020ರಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.