ಮೂರು ರಾಜ್ಯಗಳ ಮತ ಎಣಿಕೆ ಆರಂಭ: ಇಲ್ಲಿದೆ ಆರಂಭಿಕ ಲೆಕ್ಕಚಾರ
Team Udayavani, Mar 2, 2023, 8:48 AM IST
ಹೊಸದಿಲ್ಲಿ: ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಮೂರು ರಾಜ್ಯಗಳಲ್ಲಿ ಒಟ್ಟು 60 ವಿಧಾನ ಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಚುನಾವಣಾ ಫಲಿತಾಂಶ ಕುತೂಹಲ ಕೆರಳಿಸಿದೆ.
ಮೇಘಾಲಯ: (ಮ್ಯಾಜಿಕ್ ನಂಬರ್ 31)
ಮೇಘಾಲಯದಲ್ಲಿ ಆರಂಭಿಕ ಹಂತದಲ್ಲಿ 60 ಕ್ಷೇತ್ರಗಳಲ್ಲಿ 8 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು,ಕಾಂಗ್ರೆಸ್ 8 ಕ್ಷೇತ್ರದಲ್ಲಿ, ಎನ್ ಪಿಪಿ 21 ಕ್ಷೇತ್ರದಲ್ಲಿ ಹಾಗೂ ಇತರರು 11 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತ್ರಿಪುರಾ: (ಮ್ಯಾಜಿಕ್ ನಂಬರ್ 31)
ಇನ್ನು ತ್ರಿಪುರಾದಲ್ಲಿ ಕಾಂಗ್ರೆಸ್ ಮೈತ್ರಿಕೂಟ 4, ಬಿಜೆಪಿ ಮೈತ್ರಿಕೂಟ 39, ಟಿಎಂಪಿ 5,ಇತರೆ 2 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಒಟ್ಟು 60 ಕ್ಷೇತ್ರಗಳಿವೆ.
ನಾಗಲ್ಯಾಂಡ್: (ಮ್ಯಾಜಿಕ್ ನಂಬರ್ 31)
ಅಂತಿಮವಾಗಿ ನಾಗಲ್ಯಾಂಡ್ ನಲ್ಲಿ ಆರಂಭಿಕ ಹಂತದ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ಮೈತ್ರಿಕೂಟ ಒಟ್ಟು 60 ಕ್ಷೇತ್ರದಲ್ಲಿ 34 ಕ್ಷೇತ್ರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು,ಎನ್ ಪಿಎಫ್ ಪಕ್ಷ 4, ಕಾಂಗ್ರೆಸ್ 1 ಇತರೆ ಪಕ್ಷಗಳು 9 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಸಮೀಕ್ಷೆಗಳು ಹೇಳಿದ್ದೇನು?: ತ್ರಿಪುರಾ, ನಾಗಾಲ್ಯಾಂಡ್ ಬಿಜೆಪಿ ತೆಕ್ಕೆಗೆ ಹೋಗಲಿದೆ. ಮೇಘಾಲಯ ಅತಂತ್ರವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.
ಫೆ. 16ರಂದು ತ್ರಿಪುರಾ ಮತ್ತು ಫೆ. 27ರಂದು ನಾಗಾಲ್ಯಾಂಡ್ ಹಾಗೂ ಮೇಘಾಲಯ ವಿಧಾನಸಭೆಗಳಿಗೆ ಚುನಾವಣೆ ನಡೆದಿತ್ತು. ತ್ರಿಪುರಾದಲ್ಲಿ ಪ್ರಾದೇಶಿಕ ಪಕ್ಷ ತಿಪ್ರ ಮೋಥಾ 42 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದರೆ, ಬಿಜೆಪಿ 55 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.