Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
ಟ್ರೋಲರ್ ಗಳು ಇನ್ನು ನಿರುದ್ಯೋಗಿಗಳಾಗುತ್ತಾರೆ ಎಂದು ಟಾಂಗ್ !!
Team Udayavani, Nov 8, 2024, 9:23 PM IST
ಹೊಸದಿಲ್ಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಡಿ.ವೈ. ಚಂದ್ರಚೂಡ್(Dhananjaya Yeshwant Chandrachud) ಅವರು ಶುಕ್ರವಾರ(ನ8) ಸುಪ್ರೀಂ ಕೋರ್ಟ್‌ಗೆ ಭಾವನಾತ್ಮಕ ವಿದಾಯ ಹೇಳಿದರು.
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ, ಡಿ.ವೈ. ಚಂದ್ರಚೂಡ್ ಅವರು ತಮ್ಮ ನ್ಯಾಯಾಂಗ ಪ್ರಯಾಣದ ವೈಯಕ್ತಿಕ ಘಟನೆಗಳನ್ನು ಹಂಚಿಕೊಂಡರು. ನ್ಯಾಯಾಂಗ ಸುಧಾರಣೆ ಪಾರದರ್ಶಕತೆ ಮತ್ತು ನ್ಯಾಯಕ್ಕೆ ಅಚಲವಾದ ಬದ್ಧತೆಯೊಂದಿಗೆ ಸಂಯೋಜಿಸಿದ್ದೇನೆ ಎಂದು ತಮ್ಮ ಎರಡು ವರ್ಷಗಳ ಸಿಜೆಐ ಅಧಿಕಾರಾವಧಿಯ ಬಗ್ಗೆ ಹೇಳಿಕೊಂಡರು.
64 ರ ಹರೆಯದ ಸಿಜೆಐ ಚಂದ್ರಚೂಡ್ ಅವರು 24 ವರ್ಷಗಳ ನ್ಯಾಯಾಂಗ ವೃತ್ತಿಜೀವನವನ್ನು ರೂಪಿಸಿದ ವೈಯಕ್ತಿಕ ಕಥೆಗಳು, ತತ್ವಗಳು ಮತ್ತು ಸವಾಲುಗಳನ್ನು ಹಂಚಿಕೊಂಡರು.”ನನ್ನ ತಂದೆ ಪುಣೆಯಲ್ಲಿ ಒಂದು ಸಣ್ಣ ಫ್ಲಾಟ್ ಖರೀದಿಸಿದರು ಮತ್ತು ನ್ಯಾಯಾಧೀಶರಾಗಿ ನನ್ನ ಕೊನೆಯ ದಿನದವರೆಗೂ ಅದನ್ನು ಇರಿಸಿಕೊಳ್ಳಲು ಹೇಳಿದ್ದರು” ಎಂದು ಅನುಭವ ಹಂಚಿಕೊಂಡರು.
ತಮ್ಮ ಅವಧಿಯಲ್ಲಿ ಆಗಾಗ್ಗೆ ಟ್ರೋಲ್‌ಗೆ ಒಳಗಾದ ಚಂದ್ರಚೂಡ್ ಅವರು, ‘ಟ್ರೋಲರ್ ಗಳು ಇನ್ನು ನಿರುದ್ಯೋಗಿಗಳಾಗುತ್ತಾರೆ’ ಎಂದು ಟಾಂಗ್ ನೀಡಲು ಮರೆಯಲಿಲ್ಲ.
“ನೀವು ನ್ಯಾಯಾಧೀಶರಾದಾಗ, ನಿಮ್ಮ ಭಯವನ್ನು ನೀವು ಮೊದಲು ಎದುರಿಸುತ್ತೀರಿ. ನಿಮ್ಮ ಸ್ವಂತ ಮಿತಿಗಳನ್ನು ಮತ್ತು ನಿಮಗೆ ಶಿಕ್ಷಣ ನೀಡುವಲ್ಲಿ ಬಾರ್‌ನ ಪ್ರಾಮುಖ್ಯತೆಯನ್ನು ನೀವು ಕಲಿಯುತ್ತೀರಿ’ ಎಂದು ಚಂದ್ರ ಚೂಡ್ ಹೇಳಿದರು.
ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಮೇಲೆ ವಿಶ್ವಾಸ ವ್ಯಕ್ತಪಡಿಸಿ “ಸಹೋದರ ಸಂಜೀವ್ ಅವರೊಂದಿಗೆ ಸುದೀರ್ಘ ಕಾಲ ಕೆಲಸ ಮಾಡಿದ ನಂತರ, ಈ ನ್ಯಾಯಾಲಯವು ಘನ, ಸ್ಥಿರ ಮತ್ತು ವಿದ್ವತ್ಪೂರ್ಣ ವ್ಯಕ್ತಿಯ ಕೈಯಲ್ಲಿದೆ ಎಂದು ನಾನು ಹೇಳಬಲ್ಲೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.