2025ರಿಂದ ಎಲ್ಲಾ ಟ್ರಕ್‌ಗಳಲ್ಲಿ ಎಸಿ ಸೌಲಭ್ಯ ಕಡ್ಡಾಯ
ಚಾಲಕರ ಕ್ಯಾಬಿನ್‌ಗಳಲ್ಲಿ ಎಸಿ ಅಳವಡಿಸಲು ಮಾಲಕರಿಗೆ 18 ತಿಂಗಳ ಕಾಲಾವಕಾಶ
Team Udayavani, Jun 21, 2023, 7:20 AM IST
ನವದೆಹಲಿ: ಚಾಲಕರ ಯೋಗಕ್ಷೇಮಕ್ಕಾಗಿ 2025ರಿಂದ ಎಲ್ಲಾ ಟ್ರಕ್‌ಗಳ ಚಾಲಕರ ಕ್ಯಾಬಿನ್‌ಗಳಲ್ಲಿ ಏರ್ ಕಂಡಿಷನಿಂಗ್(ಎಸಿ) ಸೌಲಭ್ಯ ಕಡ್ಡಾಯವಾಗಲಿದೆ. ಈ ಕುರಿತು ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ ಮಾಹಿತಿ ನೀಡಿದ್ದಾರೆ.
ದಿನದ ಬಹುತೇಕ ಸಮಯವನ್ನು ಟ್ರಕ್ ಚಾಲಕರು ರಸ್ತೆಗಳಲ್ಲಿ ಕಳೆಯುತ್ತಾರೆ. ಅಲ್ಲದೇ ತೀವ್ರ ತಾಪಮಾನದ ನಡುವೆ ಅವರು ಕೆಲಸ ಮಾಡುತ್ತಾರೆ. ಹೀಗಾಗಿ ಏಸಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆದಿದ್ದವು. ಸೋಮವಾರವೇ ಈ ಕುರಿತ ಕಡತಕ್ಕೆ ಸಹಿ ಹಾಕಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ವೊಲ್ವೊ ಮತ್ತು ಸ್ಕ್ಯಾನಿಯಾ ಕಂಪನಿಗಳು ತಮ್ಮ ಹೈ-ಎಂಡ್ ಟ್ರಕ್‌ಗಳ ಚಾಲಕರ ಕ್ಯಾಬಿನ್‌ನಲ್ಲಿ ಏಸಿ ಸೌಲಭ್ಯ ಅಳವಡಿಸಿವೆ. ಎಲ್ಲಾ ಟ್ರಕ್‌ಗಳಲ್ಲಿ ಏಸಿ ಸೌಲಭ್ಯ ಒದಗಿಸಲು ಟ್ರಕ್ ಮಾಲೀಕರಿಗೆ 18 ತಿಂಗಳ ಕಾಲಾವಕಾಶ ನೀಡಲಾಗಿದೆ.
“ಟ್ರಕ್ ಚಾಲಕರು ದಿನದಲ್ಲಿ 12ರಿಂದ 14 ಗಂಟೆಗಳ ಕಾಲ ಚಾಲನೆ ಮಾಡುತ್ತಾರೆ. ಅಲ್ಲದೇ 43ರಿಂದ 47 ಡಿ.ಸೆ. ತಾಪಮಾನದಲ್ಲಿ ಕೆಲಸ ಮಾಡುತ್ತಾರೆ. ಈ ಎಲ್ಲದರ ಪರಿಣಾಮ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಟ್ರಕ್ ಚಾಲಕರ ಹಿತದೃಷ್ಟಿಯಿಂದ ಚಾಲಕರ ಕ್ಯಾಬಿನ್‌ಗಳಲ್ಲಿ ಏಸಿ ಕಡ್ಡಾಯಗೊಳಿಸಲಾಗುತ್ತಿದೆ,’ ಎಂದು ಗಡ್ಕರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.