UPAನಿಂದ ರೈತರ 70 ಸಾವಿರ ಕೋಟಿ ಸಾಲ ಮನ್ನಾ, ಬಿಜೆಪಿಗೆ ಯಾಕೆ ಆಗಲ್ಲ!
Team Udayavani, Mar 16, 2017, 5:05 PM IST
ನವದೆಹಲಿ: ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ದಿನೇ, ದಿನೇ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಕಳೆದ 5 ವರ್ಷಗಳಿಂದ ಭೀಕರ ಬರಗಾಲವಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ 1 ಸಾವಿರ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ದೇಶದ ಬೆನ್ನೆಲುಬು ರೈತರ ಹಿತಾಸಕ್ತಿ ಯಾಕೆ ಕಾಪಾಡುತ್ತಿಲ್ಲ? ರೈತರ ಆತ್ಮಹತ್ಯೆ ಯಾವುದೇ ಸರ್ಕಾರಕ್ಕಾದರೂ ಅಪಮಾನಕರ. ರೈತರ ರಕ್ಷಣೆಗೆ ಸರ್ಕಾರ ಮುಂದಾಗಬೇಕೆಂದು ತುಮಕೂರು ಸಂಸದ ಎಸ್.ಪಿ.ಮುದ್ದಹನುಮೇಗೌಡ ಲೋಕಸಭೆ ಕಲಾಪದಲ್ಲಿ ಆಗ್ರಹಿಸಿದರು.
ಗುರುವಾರ ಲೋಕಸಭೆ ಕಲಾಪದ ಕೃಷಿ ಇಲಾಖೆ ಬೇಡಿಕೆ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಹಣಕಾಸು ಶಿಸ್ತು ಕಾಪಾಡಲು ರೈತರ ಸಾಲ ಮನ್ನಾ ಸರಿಯಲ್ಲ ಎಂದು ಎಸ್ ಬಿಐ ಅಧ್ಯಕ್ಷರು ಹೇಳಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಾರ್ಪೊರೇಟ್ ವಲಯಕ್ಕೆ 6 ಲಕ್ಷ ಕೋಟಿ ರೂಪಾಯಿ ಇನ್ಸೆಂಟೀವ್ ನೀಡಿದೆ. ನಾವು ಪದೇ, ಪದೇ ಕೊಬ್ಬರಿ, ಅಡಕೆಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದ್ದೇವೆ. ಕೊಬ್ಬರಿ 1 ಕ್ವಿಂಟಾಲ್ ಗೆ 6,400 ರೂ. ಬೆಂಬಲ ಬೆಲೆ ಇದೆ. ಹೀಗಾಗಿ ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡರು.
ಕೇಂದ್ರ ಸರ್ಕಾರ ರೈತರ ರಕ್ಷಣೆಗೆ ಮುಂದಾಗಬೇಕೆಂದ ಮುದ್ದಹನುಮೇಗೌಡ, ಹಿಂದಿನ ಯುಪಿಎ ನೇತೃತ್ವದ ಮನಮೋಹನ್ ಸಿಂಗ್ ಸರ್ಕಾರ ರೈತರ 70 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.