ರಫೇಲ್ ವಿವಾದಕ್ಕೆ ತಿರುವು; ಪತ್ರಿಕಾ ವರದಿ ಅರ್ಧ ಸತ್ಯ:ನಿರ್ಮಲಾ
Team Udayavani, Feb 8, 2019, 11:49 PM IST
ನವದೆಹಲಿ: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿ ‘ದಿ ಹಿಂದೂ’ ಪತ್ರಿಕೆಯಲ್ಲಿ ಪ್ರಕಟವಾದ ವರದಿಯೊಂದು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಮತ್ತೂಂದು ಸುತ್ತಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ‘ರಕ್ಷಣಾ ಸಚಿವಾಲಯದ ಸಮಾಲೋಚನಾ ಸಮಿತಿ ರಫೇಲ್ ಕುರಿತು ಫ್ರಾನ್ಸ್ ಜತೆ ಮಾತುಕತೆ ನಡೆಸುತ್ತಿರುವಾಗಲೇ, ಪ್ರಧಾನಮಂತ್ರಿ ಕಾರ್ಯಾಲಯವು ‘ಪರ್ಯಾಯ ಮಾತುಕತೆ’ ನಡೆಸುತ್ತಿತ್ತು. ಈ ಮೂಲಕ ವಿಮಾನದ ದರ ನಿಗದಿ ವೇಳೆ ಪಿಎಂಒ ಹಸ್ತಕ್ಷೇಪ ಮಾಡಿತ್ತು. ಇದಕ್ಕೆ ಅಂದಿನ ರಕ್ಷಣಾ ಕಾರ್ಯದರ್ಶಿ ಜಿ.ಮೋಹನ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು’ ಎಂಬ ವರದಿ ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಶುಕ್ರವಾರ ಸರ್ಕಾರವನ್ನು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿವೆ.
ನಿರ್ಮಲಾ ತಿರುಗೇಟು: ಮೋದಿ ದೇಶದ ರಕ್ಷಣಾ ವ್ಯವಸ್ಥೆಯನ್ನೇ ನಾಶ ಮಾಡುತ್ತಿದ್ದಾರೆ ಎಂದು ಲೋಕಸಭೆಯಲ್ಲಿ ಆರೋಪಿಸಿರುವ ಪ್ರತಿಪಕ್ಷಗಳು, ಮೋದಿ ಕೂಡಲೇ ರಾಜೀನಾಮೆ ನೀಡಬೇಕು, ಪ್ರಕರಣದ ತನಿಖೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿವೆ. ಪ್ರತಿಪಕ್ಷಗಳ ಕೋಲಾಹಲ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಮುಗಿದುಹೋದ ವಿಷಯವನ್ನಿಟ್ಟುಕೊಂಡು ಸುಖಾಸುಮ್ಮನೆ ಎಳೆದಾಡಲಾಗುತ್ತಿದೆ. ಮಾಧ್ಯಮ ವರದಿಯು ರಕ್ಷಣಾ ಕಾರ್ಯದರ್ಶಿಯ ಆಕ್ಷೇಪವನ್ನು ಮಾತ್ರ ಪ್ರಕಟಿಸಿದೆ. ಅವರ ಆಕ್ಷೇಪಕ್ಕೆ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ನೀಡಿದ್ದ ಪ್ರತಿಕ್ರಿಯೆ ಪ್ರಕಟಿಸಿಲ್ಲವೇಕೆ ಎಂದು ಪ್ರಶ್ನಿಸಿದ್ದಾರೆ.
ಅಂದು ಪರ್ರಿಕರ್ ಪ್ರತಿಕ್ರಿಯೆ ನೀಡಿ, ‘ಪಿಎಂಒ, ಫ್ರಾನ್ಸ್ ಅಧ್ಯಕ್ಷರ ಕಚೇರಿಯು ಒಪ್ಪಂದದ ಪ್ರಗತಿ ಪರಿಶೀಲಿಸುತ್ತಿರುವಂತೆ ಕಾಣುತ್ತಿದೆ. ನೀವು ಕೂಲ್ ಆಗಿರಿ. ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿ ವಿವಾದ ಪರಿಹರಿಸಿಕೊಳ್ಳಿ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.