Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್... ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ
Team Udayavani, Jan 4, 2025, 5:56 PM IST
ಬಿಜಾಪುರ್: ಛತ್ತೀಸ್ ಗಢದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಸ್ಥಳೀಯ ಗುತ್ತಿಗೆದಾರನ ಭ್ರಷ್ಟಾಚಾರವನ್ನು ಬಯಲಿಗೆಳೆದ ಯೂಟ್ಯೂಬರ್ ಪತ್ರಕರ್ತ ಮುಕೇಶ್ ಚಂದ್ರಾಕರ್ ಅವರನ್ನು ಕೊ*ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಹತ್ಯೆಗೀಡಾದ ಮುಕೇಶ್ ಅವರ ಸ್ವಂತ ಸೋದರ ಸಂಬಂಧಿ ರಿತೇಶ್ ಚಂದ್ರಾಕರ್ ಎಂಬಾತನಾಗಿದ್ದಾನೆ. ಕಠಿನ ತನಿಖಾ ವರದಿಗಳಿಗೆ ಹೆಸರಾದ 28 ವರ್ಷದ ಪತ್ರಕರ್ತ ಮುಖೇಶ್ ಚಂದ್ರಾಕರ್ ಅವರ ಹತ್ಯೆಗೆ ಸಂಬಂಧಿಸಿದಂತೆಮೂವರನ್ನು ಬಂಧಿಸಲಾಗಿದೆ. ಶವ ಆರೋಪಿ ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಗೆ ಸೇರಿದ್ದ ನೀರಿನ ಟ್ಯಾಂಕ್ ನೊಳಗೆ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸುರೇಶ್ ಚಂದ್ರಾಕರ್ ಅವರ ಸಹೋದರ ರಿತೇಶ್ ಜನವರಿ 1 ರಂದು ರಾತ್ರಿ ಮುಕೇಶ್ ಅವರೊಂದಿಗೆ ಗುತ್ತಿಗೆದಾರರ ಸಭೆಯನ್ನು ಏರ್ಪಡಿಸಿದ್ದು, ನಂತರ, ಮುಖೇಶ್ ಅವರ ಫೋನ್ ಆಫ್‌ಲೈನ್‌ನಲ್ಲಿತ್ತು. ಆ ಬಳಿಕ ಹಿರಿಯ ಸಹೋದರ ಯುಕೇಶ್ ಚಂದ್ರಾಕರ್ ಅವರು ಕಾಣೆಯಾಗಿದ್ದರು ಎಂದು ವರದಿಯಾಗಿದೆ.
ಪೊಲೀಸರು ರಿತೇಶ್, ಇನ್ನೊಬ್ಬ ಕುಟುಂಬ ಸದಸ್ಯ ದಿನೇಶ್ ಚಂದ್ರಾಕರ್ ಸೇರಿದಂತೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಆದರೆ, ಭ್ರಷ್ಟಾಚಾರದ ಆರೋಪಿ ಗುತ್ತಿಗೆದಾರ ಸುರೇಶ್ ತಲೆಮರೆಸಿಕೊಂಡಿದ್ದಾನೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪತ್ರಕರ್ತನ ಹ*ತ್ಯೆಯನ್ನು ಖಂಡಿಸಿ, ಸಾವಿಗೆ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಮತ್ತು ತತ್ ಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಹಲವು ಕಾಂಗ್ರೆಸ್ ನಾಯಕರು ಛತ್ತೀಸ್ ಗಢದ ಬಿಜೆಪಿ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಏತನ್ಮಧ್ಯೆ, ಮುಖೇಶ್ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಅವರ ಮೂರು ಬ್ಯಾಂಕ್ ಖಾತೆಗಳನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.
ಹ*ತ್ಯೆ ಖಂಡಿಸಿ ರಾಯಪುರದಲ್ಲಿ ಪತ್ರಕರ್ತರು ರಾಯ್‌ಪುರ ಪ್ರೆಸ್ ಕ್ಲಬ್‌ನ ಬ್ಯಾನರ್‌ನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ನನ್ನ ಮಗಳ ಬಾಯ್‌ಫ್ರೆಂಡ್ ಫೋಟೋ ರಿವೀಲ್ ಮಾಡಿದರೆ 21 ಲಕ್ಷ ಬಹುಮಾನ: ಬಿಗ್ ಬಾಸ್‌ಗೆ ಸವಾಲು
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.