![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 4, 2019, 6:05 AM IST
ಸಾಂದರ್ಭಿಕ ಚಿತ್ರ
ಜಮ್ಮು,: ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಇರುವ ಸೇನೆಯ ಮುಂಚೂಣಿ ನೆಲೆಗಳ ಮೇಲೆ ಪಾಕಿಸ್ಥಾನದ ಸೇನೆಯು ಮಂಗಳವಾರ ಭಾರೀ ಶೆಲ್ ದಾಳಿ ಆರಂಭಿಸಿದ್ದು, ಇಬ್ಬರು ನಾಗರಿಕರು ಸಾವಿಗೀಡಾಗಿ ಇತರ 9 ಮಂದಿ ಗಾಯಗೊಂಡಿದ್ದಾರೆ.
ಶೆಲ್ ದಾಳಿಯಿಂದ 16 ವರ್ಷದ ಬಾಲಕ ಹಾಗೂ 35 ವರ್ಷದ ಮಹಿಳೆ ಮೃತ ಪಟ್ಟು, 9 ಮಂದಿ ಗಾಯ ಗೊಂಡಿದ್ದಾರೆ. ಪಾಕ್‌ನ ಈ ದುಸ್ಸಾಹಸಕ್ಕೆ ಭಾರ ತೀಯ ಯೋಧರೂ ತಕ್ಕ ಪ್ರತ್ಯುತ್ತರ ನೀಡಿದ್ದು, ಪಾಕ್ ಗಡಿಯಾಚೆ ಉಂಟಾದ ಸಾವುನೋವಿನ ಕುರಿತು ಸದ್ಯಕ್ಕೆ ಮಾಹಿತಿ ಲಭ್ಯವಾಗಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.
ಅಪರಾಹ್ನ 2.30ರ ವೇಳೆಗೆ ಪಾಕ್ ಸೇನೆ ಏಕಾಏಕಿ ಅಪ್ರಚೋದಿತ ದಾಳಿ ನಡೆಸಿದೆ. ಶಹಾಪುರ ಮತ್ತು ಕಿರ್ನಿ ವಲಯದಲ್ಲಿ ವ್ಯಾಪಕ ಶೆಲ್ ದಾಳಿ ನಡೆದಿದ್ದು, ಗುಲ್ವಾಜ್ ಅಖ್ತರ್ ಮತ್ತು ಶೋಯೆಬ್ ಅಹ್ಮದ್ ಮೃತಪಟ್ಟರೆ, ಇಬ್ಬರು ಮಹಿಳೆಯರು, ಒಬ್ಬ ಬಾಲಕ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಪರಿಸ್ಥಿತಿ ಗಂಭೀರ ವಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಕೆಲವು ಮನೆಗಳಿಗೂ ಭಾರೀ ಹಾನಿಯಾಗಿರುವ ಅಂದಾಜು ಇದೆ. ನಿಖರ ಮಾಹಿತಿ ಇನ್ನಷ್ಟೇ ಸಿಗ ಬೇಕು. ರಾತ್ರಿಯವರೆಗೂ ಶೆಲ್ ದಾಳಿ ಮುಂದುವರಿದಿತ್ತು ಎಂದು ಮೂಲಗಳು ತಿಳಿಸಿವೆ.
ಪಾಕಿಸ್ಥಾನವು ಈ ವರ್ಷದಲ್ಲಿ ಇದುವರೆಗೆ ಗಡಿಯಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಯಲ್ಲಿ ಒಟ್ಟು 32 ಮಂದಿ ಸಾವಿಗೀಡಾಗಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.