ಕ್ಷುದ್ರಗ್ರಹ ಪತ್ತೆ ಹಚ್ಚಿದ ವಿದ್ಯಾರ್ಥಿನಿಯರು!
Team Udayavani, Jul 29, 2020, 12:16 PM IST
ಹೊಸದಿಲ್ಲಿ: ಕೆಲವೇ ದಿನಗಳಲ್ಲಿ ಭೂಮಿಯ ಸಮೀಪದಿಂದ ಹಾದು ಹೋಗಲಿರುವ ಕ್ಷುದ್ರ ಗ್ರಹವೊಂದನ್ನು ಸೂರತ್ನ ಇಬ್ಬರು ಶಾಲಾ ಬಾಲಕಿಯರು ಪತ್ತೆ ಹಚ್ಚಿದ್ದಾರೆ. ಅದನ್ನು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ಕೂಡ ಪ್ರಮಾಣೀಕರಿಸಿದೆ. ಇದರಿಂದಾಗಿ ತಮ್ಮ ಆಕಸ್ಮಿಕ ಸಂಶೋಧನೆಗೆ ವಿಶ್ವಮಾನ್ಯತೆ ಸಿಕ್ಕಿರುವ ಆನಂದದಲ್ಲಿ ವೈದೇಹಿ ವೆಕಾರಿಯಾ ಸಂಜಯ್ಭಾಯ್ ಹಾಗೂ ರಾಧಿಕಾ ಲಖಾನಿ ಪ್ರಫುಲ್ಲಭಾಯಿ ಇದ್ದಾರೆ.
ಅವರು ಸೂರತ್ನ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗಾಗಿ 2 ತಿಂಗಳ ವಿಜ್ಞಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ “ಸ್ಪೇಸ್ ಇಂಡಿಯಾ’, ಟೆಕ್ಸಾಸ್ನ ಹಾರ್ಡಿನ್ ಸೈಮನ್ಸ್ ವಿವಿ, ಅಂತಾರಾಷ್ಟ್ರೀಯ ಆ್ಯಸ್ಟ್ರೋನ ಮಿಕಲ್ ಸರ್ಚ್ ಕೊಲಾಬರೇಷನ್ ಸಂಸ್ಥೆಗಳ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ಬಾಹ್ಯಾಕಾಶ ವಿಜ್ಞಾನದ ಬಗ್ಗೆ ಆಸಕ್ತಿ ಕೆರಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹವಾಯ್ನಲ್ಲಿರುವ ಪ್ಯಾನ್ ಸ್ಟಾರ್ಸ್ ಎಂಬ ಅತ್ಯಾಧುನಿಕ ಟೆಲಿಸ್ಕೋಪ್ ಬಳಸುವುದನ್ನು ಹೇಳಿಕೊಡಲಾಗುತ್ತಿತ್ತು. ಕಲಿಕೆಯಲ್ಲಿ ನಿರತರಾಗಿದ್ದ ವೈದೇಹಿ ಹಾಗೂ ರಾಧಿಕಾ, ಗ್ರಹವೊಂದು ಚಲಿಸುತ್ತಿರುವುದನ್ನು ಪತ್ತೆ ಹಚ್ಚಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.