ಅನಂತ್ ನಾಗ್: ಭದ್ರತಾ ಪಡೆ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಉಗ್ರರು ಬಲಿ
Team Udayavani, Apr 25, 2019, 4:05 PM IST
ಶ್ರೀನಗರ:ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಗುರುವಾರ ನಡೆದಿದೆ.
ಭದ್ರತಾ ಪಡೆಯ ಎನ್ ಕೌಂಟರ್ ಗೆ ಬಲಿಯಾದ ಉಗ್ರರನ್ನು ಸಫ್ದರ್ ಅಮಿನ್ ಬಟ್(25ವರ್ಷ) ಹಾಗೂ ಬುರ್ಹಾನ್ ಅಹ್ಮದ್ ಗನಿ(25ವರ್ಷ) ಎಂದು ಗುರುತಿಸಲಾಗಿದೆ. 9ನೇ ತರಗತಿವರೆಗೆ ಕಲಿತಿದ್ದ ಸಫ್ದರ್ 2017ರಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ಸೇರಿದ್ದ. ಗನಿ ಅಲಿಯಾಸ್ ಸೈಫುಲ್ಲಾ ಫಿಸಿಯೋಥೆರಪಿ ಪದವಿ ಪಡೆದಿದ್ದ. ಈತ ಕೂಡಾ 2018ರ ಜೂನ್ ನಲ್ಲಿ ಹಿಜ್ಬುಲ್ ಉಗ್ರಗಾಮಿ ಸಂಘಟನೆಗೆ ಸೇರ್ಪಡೆಯಾಗಿದ್ದ ಎಂದು ಮಾಧ್ಯಮದ ವರದಿ ತಿಳಿಸಿದೆ.
ಗುಪ್ತಚರ ಇಲಾಖೆಯ ನಿಖರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಬಿಜ್ ಬೆಹ್ರಾ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ನಡೆಸಿದ್ದರು.
ಈ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ದಾಳಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.