ಕುಪ್ವಾರದಲ್ಲಿ ಶಸ್ತ್ರಾಸ್ತ್ರ ಸಹಿತ ಇಬ್ಬರು ಹೈಬ್ರಿಡ್ ಉಗ್ರರ ಬಂಧನ
Team Udayavani, Jul 29, 2022, 8:03 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಲಷ್ಕರ್-ಎ-ತೊಯ್ಬಾ ಸಂಘಟನೆಯ ಇಬ್ಬರು ಹೈಬ್ರಿಡ್ ಉಗ್ರರನ್ನು ಭದ್ರತಾ ಪಡೆಗಳು ಶುಕ್ರವಾರ ಬಂಧಿಸಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಪ್ವಾರದ ಲಾಡರ್ವಾನ್‌ನ ತಾಲಿಬ್ ಅಹ್ಮದ್ ಶೇಖ್ ಮತ್ತು ಕುಪ್ವಾರದ ಕವಾಡಿ ಲಾಡರ್ವಾನ್‌ನ ಶಮೀಮ್ ಅಹ್ಮದ್ ಎಂದು ಗುರುತಿಸಲಾದ ಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಪೊಲೀಸರು ಮತ್ತು ಸೇನೆ ಜಂಟಿಯಾಗಿ ಬಂಧಿಸಿದ್ದು, ಇಬ್ಬರು ಎಲ್‌ಇಟಿ ಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಬಳಿಯಿದ್ದ ನಾಲ್ಕು ಪಿಸ್ತೂಲ್‌ಗಳು, ಎಂಟು ಪಿಸ್ತೂಲ್ ಮ್ಯಾಗಜೀನ್‌ಗಳು, 130 ಪಿಸ್ತೂಲ್ ರೌಂಡ್‌ಗಳು ಮತ್ತು 10 ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
‘ಹೈಬ್ರಿಡ್ ಉಗ್ರರು’ ಪದವು ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಸೃಷ್ಟಿಸಿದ ಪದವಾಗಿದ್ದು, ಉಗ್ರರ ಪಟ್ಟಿಯಲ್ಲಿ ಸೇರ್ಪಡೆಯಾಗಿರದವರು ಎಲ್ಲ ರೀತಿಯ ಉಗ್ರ ಕೃತ್ಯಗಳನ್ನು ಎಸಗಲು ತರಬೇತಿ ಪಡೆದು, ವಿಧ್ವಂಸಕ ಕೃತ್ಯ ಎಸಗಿದ ಬಳಿಕ ಸಾಮಾನ್ಯರಂತೆ ದಿನ ಕಳೆಯುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…