ವೆಬ್‌ಸೈಟ್ ಹ್ಯಾಕಿಂಗ್ ಖದೀಮರು:ಇಬ್ಬರು ಕಾಶ್ಮೀರಿಗಳು ಅರೆಸ್ಟ್
Team Udayavani, Apr 28, 2018, 12:01 PM IST
ಹೊಸದಿಲ್ಲಿ : ಸರಕಾರದ್ದೂ ಸೇರಿದಂತೆ ಐನೂರಕ್ಕೂ ಅಧಿಕ ಭಾರತೀಯ ವೆಬ್ ಸೈಟ್‌ಗಳನ್ನು ಹ್ಯಾಕ್ ಮಾಡುವಲ್ಲಿ ಶಾಮೀಲಾದ ಆರೋಪದ ಮೇಲೆ ದಿಲ್ಲಿ ಪೊಲೀಸರು ಇಬ್ಬರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಪಂಜಾಬ್‌ನಲ್ಲಿ ಬಂಧಿಸಿದ್ದಾರೆ.
ಆರೋಪಿಗಳನ್ನು ಶಾಹಿದ್ ಮಲ್ಲಾ (ಪಂಜಾಬಿನ ರಾಜಪುರದ ಆರ್ಯನ್ ಗ್ರೂಪ್ ಆಫ್ ಕಾಲೇಜಿನ ಸಿಎಸ್‌ಇ ವಿದ್ಯಾರ್ಥಿ) ಮತ್ತು ಆದಿಲ್ ಹುಸೇನ್ ತೇಲಿ (ಜಾಲಂಧರ್ ನ ಸೈಂಟ್ ಸೋಲ್ಜರ್ ಮ್ಯಾನೇಜ್‌ಮೆಂಟ್ ಆ್ಯಂಡ್ ಟೆಕ್ನಿಕಲ್ ಇನ್‌ಸ್ಟಿಟ್ಯೂಟ್ ಇದರ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿ) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಮತ್ತು ಅನಂತ್‌ನಾಗ್ ಜಿಲ್ಲೆಯ ನಿವಾಸಿಗಳೆಂದು ಗೊತ್ತಾಗಿದೆ.
ಖಚಿತ ಮಾಹಿತಿಯ ಮೇರೆಗೆ ದಿಲ್ಲಿ ಪೊಲೀಸ್ ಸೈಬರ್ ದಳದವರು ಶಾಹಿದ್ ಮಲ್ಲಾ ಮತ್ತು ಹುಸೇನ್ ತೇಲಿಯನ್ನು ಪಂಜಾಬ್‌ನಲ್ಲಿನ ಬಾಡಿಗೆ ಮನೆಯೊಂದರಲ್ಲಿ ಬಂಧಿಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ತನಿಖೆಯ ವೇಳೆ ಇವರ ಆನ್‌ಲೈನ್ ಚಟುವಟಿಕೆಗಳು “ಟೀಂ ಹ್ಯಾಕರ್ಸ್ ಥರ್ಡ್ ಐ” ಎಂಬ ದೇಶ ವಿರೋಧಿ ಹ್ಯಾಕಿಂಗ್ ಸಮೂಹದ ಭಾಗವಾಗಿದ್ದವು ಎಂಬದು ಖಚಿತವಾಯಿತು. ಈ ಸಮೂಹವು ಸರಕಾರದ್ದೂ ಸೇರಿದಂತೆ ಐನೂರಕ್ಕೂ ಅಧಿಕ ಭಾರತೀಯ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.