ಇಬ್ಬರು ಹಿಜ್ಬುಲ್ ಉಗ್ರರ ಹತ್ಯೆಗೈದ ಭದ್ರತಾ ಪಡೆ
Team Udayavani, Sep 5, 2017, 7:30 AM IST
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.
ಸೋಪೋರ್ನಲ್ಲಿ ಉಗ್ರರು ಅಡಗಿರುವ ಸುಳಿವಿನ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಅವರನ್ನು ಸುತ್ತುವರಿದಿದ್ದು, ಆಗ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಕೆಲವು ಗಂಟೆಗಳ ಚಕಮಕಿ ಬಳಿಕ ಇಬ್ಬರು ಹಿಜ್ಬುಲ್ ಮುಜಾ ಹಿದೀನ್ ಉಗ್ರರನ್ನು ಸದೆಬಡಿಯಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅವರ ಬಳಿಯಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ.
ಇದೇ ವೇಳೆ, ಜಮ್ಮುವಿನ ಭಾರತ-ಪಾಕ್ ಅಂತಾ ರಾಷ್ಟ್ರೀಯ ಗಡಿಯಲ್ಲಿ ಬೇಲಿ ಹತ್ತಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಬಿಎಸ್ಎಫ್ ಯೋಧರು ಹತ್ಯೆಗೈದಿದ್ದಾರೆ. ಇನ್ನೊಂದೆಡೆ, ಅನಂತ್ನಾಗ್ ಜಿಲ್ಲೆಯಲ್ಲಿ ಸಿಆರ್ಪಿಎಫ್ನ ಗಸ್ತು ವಾಹನದ ಮೇಲೆ ಉಗ್ರರು ಸೋಮವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ. ಪರಿಣಾಮ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.