ಅನಂತ್ ನಾಗ್ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನಾಪಡೆಗಳು
Team Udayavani, Feb 22, 2020, 7:57 AM IST
ಜಮ್ಮು-ಕಾಶ್ಮೀರ: ಇಂದು ಮುಂಜಾನೆ ಅನಂತ್ ನಾಗ್ ಜಿಲ್ಲೆಯ ಸಂಗಂ ಟೌನ್ ಬಳಿಯಿರುವ ಗುಂಡ್ ಬಾಬಾ ಖಲೀಲ್ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಸೇನಾಪಡೆಗಳು ಹತ್ಯೆಗೈದಿವೆ.
ಪೊಲೀಸರು, ಸಿಆರ್ ಪಿಎಫ್ ಪಡೆಗಳು ಹಾಗೂ ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರನೆಯಲ್ಲಿ ಲಷ್ಕರ್ ಏ ತೈಬಾ ಜೊತೆ ನಂಟು ಹೊಂದಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಮಾತ್ರವಲ್ಲದೆ ಸ್ಥಳದಲ್ಲಿದ್ದ ಏಕೆ-47, ಒಂದು ಪಿಸ್ತೂಲ್ , ಮದ್ದುಗುಂಡುಗಳು ಸೇರಿದಂತೆ ಹಲವು ಮ್ಯಾಗಜೀನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಾಶ್ಮೀರ ವಲಯ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದಿದ್ದಾರೆ.
Sangam #Encounter Update: 02 LeT #terrorists have been #killed in this operation by Police, CRPF & Army. #Arms & ammunition recovered. Details shall follow. @JmuKmrPolice https://t.co/5AFEMXJJAn
— Kashmir Zone Police (@KashmirPolice) February 21, 2020
ಹತ್ಯೆಯಾದ ಭಯೋತ್ಪಾದಕರನ್ನು ನವೀದ್ ಭಟ್ , ಯಾಸಿನ್ ಭಟ್ ಎಂದು ಗುರುತಿಸಲಾಗಿದೆ.
ಶುಕ್ರವಾರ ತಡರಾತ್ರಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕ ನಡುವೆ ಚಕಮಕಿ ನಡೆದಿತ್ತು. ಶನಿವಾರ ಮುಂಜಾನೆ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.