![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 27, 2022, 9:54 PM IST
ಶ್ರೀನಗರ/ಡೆಹ್ರಾಡೂನ್: ವಾರ್ಷಿಕ ಅಮರನಾಥ ಯಾತ್ರೆಗೆ ಮೂರು ದಿನಗಳು ಬಾಕಿಯಿರುವಂತೆಯೇ ಜಮ್ಮು – ಕಾಶ್ಮೀರದಾದ್ಯಂತ ಭದ್ರತಾ ಪಡೆಗಳು ಹದ್ದಿನ ಕಣ್ಣಿಟ್ಟಿವೆ. ಯಾತ್ರೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಉದ್ದೇಶದಿಂದ ಉಗ್ರ ಚಟುವಟಿಕೆಗಳನ್ನು ಹತ್ತಿಕ್ಕಲು ಅವಿರತ ಶ್ರಮ ವಹಿಸುತ್ತಿವೆ.
ಸೋಮವಾರ ಕುಲ್ಗಾಂ ಜಿಲ್ಲೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ನೌಪೋರಾ- ಖೇರ್‌ಪೋರಾ ವಲಯದಲ್ಲಿ ಶೋಧ ನಡೆಸುತ್ತಿದ್ದಾಗ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಯೋಧರು ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರನ್ನು ಸದೆಬಡಿಯಲಾಯಿತು.
ಇನ್ನೊಂದೆಡೆ ಸೋಮವಾರ ದೋಡಾ ನಗರದಲ್ಲಿ ನಾಕಾಬಂಧಿ ವೇಳೆ ಲಷ್ಕರ್-ಎ-ತಯ್ಯಬಾ ಉಗ್ರ ಫರೀದ್ ಅಹ್ಮದ್‌ನನ್ನು ಜಮ್ಮು – ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಆತನಲ್ಲಿದ್ದ ಚೈನೀಸ್ ಪಿಸ್ತೂಲ್, 2 ಮ್ಯಾಗಜಿನ್, 14 ಸಜೀವ ಗುಂಡುಗಳು ಮತ್ತು ಒಂದು ಮೊಬೈಲ್ ಫೋನನ್ನು ವಶಕ್ಕೆ ಪಡೆಯಲಾಗಿದೆ.
30ರಿಂದ ಯಾತ್ರೆ ಆರಂಭ
ಜೂ. 30ರಿಂದ ಅಮರನಾಥ ಯಾತ್ರೆ ಆರಂಭವಾಗಲಿದ್ದು, ಆ. 11ರ ವರೆಗೆ ನಡೆಯಲಿದೆ. ಕೊರೊನಾ ಹಿನ್ನೆಲೆಯಲ್ಲಿ ಸತತ 3 ವರ್ಷಗಳಿಂದ ಯಾತ್ರೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಆಗಮಿಸುವ ಸಾಧ್ಯತೆಯಿದೆ. ಯಾತ್ರಿಗಳು ಸಂಚರಿಸುವಂಥ ಪಹಲ್ಗಾಂ ಮತ್ತು ಬಲ್ತಾಲ್ ಎರಡೂ ಮಾರ್ಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಚಾರ್‌ಧಾಮ ಯಾತ್ರೆ: 2 ತಿಂಗಳಲ್ಲಿ 203 ಸಾವು
ಮೇ 3ರಿಂದ ಚಾರ್‌ಧಾಮ್ ಯಾತ್ರೆ ಆರಂಭವಾದಾಗಿನಿಂದ ಈವರೆಗೆ ಅಂದರೆ, 2 ತಿಂಗಳ ಅವಧಿಯಲ್ಲಿ 203 ಮಂದಿ ಯಾತ್ರಿಗಳು ಸಾವಿಗೀಡಾಗಿದ್ದಾರೆ ಎಂದು ಉತ್ತರಾಖಂಡ ತುರ್ತು ಕಾರ್ಯಾಚರಣ ಕೇಂದ್ರ ಮಾಹಿತಿ ನೀಡಿದೆ. ಬಹುತೇಕ ಯಾತ್ರಿಗಳ ಸಾವಿಗೆ ಹೃದಯಾಘಾತ ಮತ್ತು ಇತರ ಆರೋಗ್ಯ ಸಮಸ್ಯೆಗಳೇ ಕಾರಣ ಎಂದು ತಿಳಿದುಬಂದಿದೆ. 2 ತಿಂಗಳಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ಯಾತ್ರಿಗಳು ಚಾರ್‌ಧಾಮ್‌ಗೆ ಭೇಟಿ ನೀಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.