ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರ ಮಾಡಿದ ಮುಸ್ಲೀಂ ಸಹೋದರರು!
Team Udayavani, Apr 20, 2021, 2:15 PM IST
ತೆಲಂಗಾಣ : ಕೋವಿಡ್ ನಿಂದ ಮೃತ ಪಟ್ಟ ಹಿಂದೂ ವ್ಯಕ್ತಿಯ ಅಂತ್ಯ ಕ್ರಿಯೆಯನ್ನು ಮುಸ್ಲೀಂ ಸಮುದಾಯದ ಇಬ್ಬರು ಸಹೋದರರು ನಡೆಸಿಕೊಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ಘಟನೆಯು ತೆಲಂಗಾಣದ ಪೆಡ್ಡಾ ಕೊಡಪಾಗಲ್ ಮಂಡಲದ ಕೇಟೆಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ.
ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯನ್ನು ಮೊಘುಲಿಯಾ ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.. ನಂತರ ಇವರಿಗೆ ಕೋವಿಡ್ ಸೋಂಕು ದೃಢ ಪಟ್ಟಿದ್ದು ಇವರನ್ನು ಭನಸುವಾಡದ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ಕೊಡಿಸಲಾಗಿದೆ. ಆದರೂ ಕೂಡ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೊಘುಲಿಯಾ ಸಾವನ್ನಪ್ಪಿದ್ದಾರೆ.
ಕೋವಿಡ್ ಸೋಂಕು ತಗುಲಿ ಮೊಘುಲಿಯಾ ಸಾವನ್ನಪ್ಪಿದ್ದರಿಂದ ಕುಟುಂಬದವರು ಅವರ ಮೃತ ದೇಹವನ್ನು ಆಸ್ಪತ್ರೆಯಿಂದ ಕೊಂಡೊಯ್ಯಲು ಮತ್ತು ಅಂತಿಮ ಸಂಸ್ಕಾರ ಮಾಡಲು ಮುಂದಾಗಲಿಲ್ಲ. ಇವರು ಕೋವಿಡ್ ಗೆ ಹೆದರಿ ಅಂತ್ಯ ಸಂಸ್ಕಾರಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯ ಮೂಲಗಳು ತಿಳಿಸಿದೆ.
ಇದನ್ನು ಕಂಡ ಶಫಿ ಮತ್ತು ಅಲಿ ಎಂಬ ಇಬ್ಬರು ಮುಸಲ್ಮಾನ ಬಾಂಧವರು ಮೊಘುಲಿಯಾ ಅವರ ಮೃತ ದೇಹವನ್ನು ಭನಸುವಾಡ ಪ್ರದೇಶದಲ್ಲಿ ಹಿಂದೂ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ. ಶಫಿ ಮತ್ತು ಅಲಿ ಈ ಇಬ್ಬರಿಗೂ ಮತ್ತು ಮೊಘುಲಿಯಾಗು ಯಾವುದೇ ರಕ್ತ ಸಂಬಂಧ ಇಲ್ಲ. ಆದ್ರೆ ಮಾನವೀಯ ದೃಷ್ಟಿಯಿಂದ ಮಾಡಿರುವ ಈ ಕೆಲಸ ಮೆಚ್ಚುಗೆಗೆ ಕಾರಣವಾಗುತ್ತಿದೆ.
ಇವರ ಕಾರ್ಯಕ್ಕೆ ಸ್ಥಳೀಯರು ಸಂತೋಷವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಇಬ್ಬರು ಸಹೋದರರ ನಿಸ್ವಾರ್ಥ ಕೆಲಸವನ್ನು ಶ್ಲಾಘಿಸಿದ್ದು, ಕೋಮು ಸೌಹಾರ್ದತೆ ಮೆರೆದಿರುವ ಈ ಇಬ್ಬರು ಸಹೋದರರ ಬಗ್ಗೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
MUST WATCH
ಹೊಸ ಸೇರ್ಪಡೆ
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.