ಎಲ್‌ಓಸಿಯಲ್ಲಿ ಪಾಕ್ ಗುಂಡಿನ ದಾಳಿಗೆ ಇಬ್ಬರು ಬಲಿ; ಮೂವರಿಗೆ ಗಾಯ
Team Udayavani, May 13, 2017, 11:40 AM IST
ಶ್ರೀನಗರ : ಪಾಕಿಸ್ಥಾನ ಇಂದು ಶನಿವಾರ ಕೂಡ ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಗೈದು ಗುಂಡಿನ ದಾಳಿ ನಡೆಸಿದ್ದು ಇದರ ಪರಿಣಾಮವಾಗಿ ಇಬ್ಬರು ಪೌರರು ಮಡಿದು ಇತರ ಮೂವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ನಿನ್ನೆ ಶುಕ್ರವಾರ ಪಾಕ್ ಸೇನೆ ನಡೆಸಿದ ಗಡಿ ಗುಂಡಿನ ದಾಳಿಗೆ ಓರ್ವ ಮಹಿಳೆ ಮೃತಪಟ್ಟಿದ್ದರು.
ಪಾಕ್ ಸೇನೆ ಯದ್ವಾತದ್ವಾ ಮೋರ್ಟಾರ್ ಶೆಲ್ಲಿಂಗ್ ಹಾಗೂ ಗುಂಡಿನ ದಾಳಿ ನಡೆಸಿದ್ದು ಭಾರತೀಯ ಸೇನೆ ಇದಕ್ಕೆ ಅತ್ಯಂತ ಪರಿಣಾಮಕಾರಿ ಉತ್ತರವನ್ನು ಶಸ್ತ್ರಾಸ್ತ್ರಗಳ ಮೂಲಕವೇ ನೀಡಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.
ಪಾಕ್ ಸೇನೆ ನೌಶೇರಾ ವಲಯದಲ್ಲಿ ನಮ್ಮ ಮುಂಚೂಣಿ ಠಾಣೆಗಳನ್ನು ಗುರಿ ಇರಿಸಿ ಮೋರ್ಟಾರ್ ಹಾಗೂ ಭಾರೀ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸಿದೆ; ನಾವೂ ಅದಕೆ ತಕ್ಕುದಾದ ಉತ್ತರವನ್ನು ನೀಡಿದ್ದೇವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಲೆ| ಕ| ಮನೀಶ್ ಮೆಹ್ತಾ ತಿಳಿಸಿದ್ದಾರೆ.
2015 ಮತ್ತು 2016ರಲ್ಲಿ ಜಮ್ಮು ಕಾಶ್ಮೀರದ ಎಲ್‌ಓಸಿಯಲ್ಲಿ ಪಾಕ್ ನಡೆಸಿದ್ದ ಗಡಿ ಉಲ್ಲಂಘನೆ ದಾಳಿಯಲ್ಲಿ 23 ಭದ್ರತಾ ಸಿಬಂದಿಗಳು ಮೃತಪಟ್ಟಿರುವುದಾಗಿ ಗೃಹ ಸಚಿವಾಲಯವು ಆರ್‌ಟಿಐಗೆ ಉತ್ತರವಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.