![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 1, 2021, 7:15 PM IST
ಗಾಂಧಿನಗರ: ಕೋವಿಡ್ ನಕಲಿ ಸರ್ಟಿಫಿಕೇಟ್ ನೀಡುತ್ತಿದ್ದ ಆರೋಪದಡಿ ಸೂರತ್ ನಲ್ಲಿರುವ ಎರಡು ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ಗುಜರಾತ್ ಸರ್ಕಾರ ಬಾಗಿಲು ಮುಚ್ಚಿಸಿದೆ.
ಗುಜರಾತ್ ಉಪಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರು ಆದಂತಹ ನಿತಿನ್ ಪಾಟೀಲ್, ಗುರುವಾರ ವಿಧಾನ ಸಭೆ ಅಧಿವೇಶನದಲ್ಲಿ ಕಪದ್ವಂಜ್ ಕ್ಷೇತ್ರದ ಎಂಎಲ್‍ಎ ಕಲಾಭಾಯ್ ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಈ ವಿಚಾರವನ್ನು ತಿಳಿಸಿದರು.
ಸೂರತ್ ನಲ್ಲಿರುವ ಎರಡು ಪ್ರಯೋಗಾಲಯಗಳು ಕೋವಿಡ್ ವರದಿಯ ನಕಲಿ ಪ್ರಮಾಣ ಪತ್ರಗಳನ್ನು ನೀಡುತ್ತಿರುವುದರ ಕುರಿತು ಸಾಕಷ್ಟು ದೂರುಗಳು ಬಂದಿದ್ದವು. ಅಲ್ಲಿರುವ ತೇಜಸ್ ಹಾಗೂ ಹೇಮಜ್ಯೋತಿ ಪ್ರಯೋಗಾಲಯಗಳು ಫೇಕ್ ಸರ್ಟಿಫಿಕೇಟ್‍ಗಳನ್ನು ನೀಡುತ್ತಿದ್ದವು. ಈ ಕುರಿತು ತನಿಖೆ ನಡೆಸಿದ ವೇಳೆ ಅಸಲಿಯತ್ತು ನಮ್ಮ ಗಮನಕ್ಕೆ ಬಂತು. ಇತ್ತೀಚಿಗಷ್ಟೆ ಈ ಲಾಬ್‍ಗಳಿಗೆ ಸರ್ಕಾರ ಅನುಮತಿ ನೀಡಿತ್ತು. ಇದೀಗ ಆ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ಹೇಳಿದ್ದಾರೆ.
ಇನ್ನು ದೇಶ್ಯಾದ್ಯಂತ ಕೋವಿಡ್ ಎರಡನೇ ಅಲೆ ಆತಂಕ ಎದುರಾಗಿದೆ. ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಕೆಲವೊಂದು ರಾಜ್ಯಗಳು ಲಾಕ್‍ಡೌನ್ ಮೊರೆ ಹೋಗಿದ್ದು, ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಂಡಿವೆ. ಹಾಗೂ ಕೋವಿಡ್ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.