ಪಶ್ಚಿಮ ಬಂಗಾಳದಲ್ಲಿ ಅಲ್ ಖೈದಾ ಶಂಕಿತ ಸದಸ್ಯರಿಬ್ಬರ ಬಂಧನ
ಕನಿಷ್ಠ 17 ಸದಸ್ಯರು ಸಕ್ರಿಯರಾಗಿದ್ದಾರೆ...
Team Udayavani, Aug 18, 2022, 1:56 PM IST
ಕೋಲ್ಕತ: ಉತ್ತರ 24 ಪರಗಣ ಜಿಲ್ಲೆಯಿಂದ ಅಲ್ ಖೈದಾ ಭಾರತೀಯ-ಉಪಖಂಡ (ಎಕ್ಯೂಐಎಸ್) ಸಂಘಟನೆಯ ಇಬ್ಬರು ಶಂಕಿತ ಸದಸ್ಯರನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಳಿವಿನ ಮೇರೆಗೆ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆಯ ಅಧಿಕಾರಿಗಳು ಶಾಸನ್ ಪೊಲೀಸ್ ಠಾಣಾ ವ್ಯಾಪ್ತಿಯ ಖರಿಬರಿ ಪ್ರದೇಶದಲ್ಲಿ ಬುಧವಾರ ರಾತ್ರಿ ದಾಳಿ ನಡೆಸಿ ಇಬ್ಬರನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ತೊಡಗಿಸಿಕೊಂಡಿದ್ದಕ್ಕಾಗಿ ಬಂಧಿಸಿದ್ದಾರೆ. ಒಬ್ಬ ದಕ್ಷಿಣ ದಿನಾಜ್‌ಪುರ ಜಿಲ್ಲೆಯ ಗಂಗಾರಾಮ್‌ಪುರ ನಿವಾಸಿ ಎಂದು ಗುರುತಿಸಲಾಗಿದ್ದು, ಮತ್ತೊಬ್ಬಹೂಗ್ಲಿಯ ಅರಾಂಬಾಗ್‌ನವನು. ದಾಳಿಯ ಸಮಯದಲ್ಲಿ ಹಲವಾರು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
“ಎಕ್ಯೂಐಎಸ್‌ನಲ್ಲಿ ಭಾಗಿಯಾಗಿರುವ ಕಾರಣ ಇಬ್ಬರನ್ನೂ ಬಂಧಿಸಲಾಗಿದೆ. ಭಾರತದ ವಿರುದ್ಧ ಯುದ್ಧ ಸಾರುವ ಅತ್ಯಂತ ಮೂಲಭೂತವಾದ ಚಿಂತನೆಗಳನ್ನು ಒಳಗೊಂಡಿರುವ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರ ವಿರುದ್ಧ ನಿರ್ದಿಷ್ಟ ಪ್ರಕರಣವನ್ನು ಪ್ರಾರಂಭಿಸಲಾಗುತ್ತಿದೆ” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.
ಇಬ್ಬರನ್ನು ವಿಚಾರಣೆಗೊಳಪಡಿಸಿದ ನಂತರ, ಎಕ್ಯೂಐಎಸ್‌ನ ಕನಿಷ್ಠ 17 ಸದಸ್ಯರು ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ ಎಂದು ಪೊಲೀಸರು ತಿಳಿದುಕೊಂಡಿದ್ದು, ಇಬ್ಬರನ್ನು ಗುರುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.