ಉಗ್ರ ಘೋಷಣೆಗೆ ಲೋಕ ಅಸ್ತು

ವಿಪಕ್ಷದ ವಿರೋಧದ ನಡುವೆಯೇ ಲೋಕಸಭೆಯಲ್ಲಿ ಅನುಮೋದನೆ

Team Udayavani, Jul 25, 2019, 5:03 AM IST

q-40

ನವದೆಹಲಿ: ಸಂಘಟನೆಯ ಜೊತೆಗೆ ವ್ಯಕ್ತಿಯನ್ನೂ ‘ಉಗ್ರ’ ಎಂದು ಘೋಷಿಸಲು ಅನುವು ಮಾಡುವ ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ ತಿದ್ದುಪಡಿಗೆ ಲೋಕಸಭೆಯಲ್ಲಿ ಬುಧವಾರ ಅನುಮೋದನೆ ನೀಡಲಾಗಿದೆ. ವಿಪಕ್ಷಗಳ ವಿರೋಧ ಹಾಗೂ ಸಭಾತ್ಯಾಗದ ಮಧ್ಯೆಯೇ ಧ್ವನಿಮತದಿಂದ ಅನುಮೋದನೆ ಲಭ್ಯವಾಗಿದೆ.

ಮಸೂದೆ ಮಂಡನೆಯ ಚರ್ಚೆ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್‌ ಶಾ, ‘ಇದೇ ರೀತಿಯ ಕಾನೂನು ಅಮೆರಿಕ, ವಿಶ್ವಸಂಸ್ಥೆ, ಚೀನಾ, ಪಾಕಿಸ್ತಾನ, ಇಸ್ರೇಲ್ ಹಾಗೂ ಐರೋಪ್ಯ ಒಕ್ಕೂಟದಲ್ಲಿವೆ. ವ್ಯಕ್ತಿಯನ್ನು ಉಗ್ರ ಎಂದು ಘೋಷಿಸುವ ಅಗತ್ಯವಿದೆ. ನಗರ ನಕ್ಸಲರು ಹಾಗೂ ಉಗ್ರರ ಪರ ಒಲವು ಹೊಂದಿರುವವರಿಗೆ ಸರ್ಕಾರ ಯಾವುದೇ ಅನುಕಂಪ ತೋರುವುದಿಲ್ಲ. ನಮ್ಮ ದೇಶದಲ್ಲಿ, ಸಾಮಾಜಿಕ ಕಾರ್ಯದಲ್ಲಿ ತುಂಬಾ ಜನ ಗೌರವಯುತವಾಗಿ ತೊಡಗಿಸಿಕೊಂಡಿದ್ದಾರೆ. ಅವರನ್ನು ಬಂಧಿಸುವ ಅಗತ್ಯ ಪೊಲೀಸರಿಗೆ ಇಲ್ಲ. ಆದರೆ ನಗರ ನಕ್ಸಲರ ಬಗ್ಗೆ ನಾವು ಯಾವುದೇ ಅನುಕಂಪ ಹೊಂದಿಲ್ಲ’ ಎಂದಿದ್ದಾರೆ.

ಇದೇ ಮಸೂದೆಯನ್ನು ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರೂಪಿಸಿತ್ತು. ಆದರೆ ನಾವು ಮಂಡಿಸಿದ್ದಕ್ಕೆ ಕಾಂಗ್ರೆಸ್‌ ವಿರೋಧಿಸುತ್ತಿದೆ. ನೀವು ಮಾಡಿದ್ದಾಗ ಸರಿ, ನಾವು ಮಾಡಿದ್ದಾಗ ತಪ್ಪೇ ಎಂದು ಪ್ರಶ್ನಿಸಿದ್ದಾರೆ.

ಮಸೂದೆಯನ್ನು ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿತು. ಆದರೆ ಆಡಳಿತ ಪಕ್ಷ ಇದಕ್ಕೆ ಒಪ್ಪದೇ ಇದ್ದಾಗ ಮಸೂದೆಯನ್ನು ಧ್ವನಿ ಮತಕ್ಕೆ ಹಾಕಲು ನಿರ್ಧರಿಸ ಲಾಯಿತು. ಆಗ ಕಾಂಗ್ರೆಸ್‌ ಸಭಾತ್ಯಾಗ ನಡೆಸಿತು. ಮಸೂದೆ ರಾಜ್ಯಸಭೆಯಲ್ಲಿ ಇನ್ನಷ್ಟೇ ಅನುಮೋದನೆ ಪಡೆಯಬೇಕಿದೆ.

ಮತ ವಿಭಜನೆಗೆ ಒವೈಸಿ ಪಟ್ಟು: ಕಾಂಗ್ರೆಸ್‌, ಟಿಎಂಸಿ ಸೇರಿದಂತೆ ವಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದ ನಂತರವೂ ಎಐಎಂಐಎಂ ಸಂಸದ ಅಸಾದುದ್ದೀನ್‌ ಒವೈಸಿ ಮತ ವಿಭಜನೆಗೆ ಆಗ್ರಹಿಸಿದರು. ಆದರೆ ಇದಕ್ಕೆ ಆಡಳಿತ ಪಕ್ಷ ವಿರೋಧಿಸಿತು. ಒಬ್ಬ ಸಂಸದ ಮತ ವಿಭಜನೆಗೆ ಆಗ್ರಹಿಸುವುದು ಸರಿಯಲ್ಲ. ಇದಕ್ಕೆ ನಿಯಮಾವಳಿಯಲ್ಲಿ ತಿದ್ದುಪಡಿ ತರಬೇಕು ಎಂದೂ ಆಗ್ರಹಿಸಲಾಯಿತು. ಸುಮಾರು ಅರ್ಧ ಗಂಟೆ ಕಾಲ ಭಾರಿ ಚರ್ಚೆ ನಡೆದು, ಕೊನೆಗೂ ಮಸೂದೆಯನ್ನು ಮತಕ್ಕೆ ಹಾಕಲಾಯಿತು. ಪರ ಹಾಗೂ ವಿರೋಧವಾಗಿರುವವರು ಎದ್ದು ನಿಂತರು. ಅವರ ಸಂಖ್ಯೆಯನ್ನು ಲೆಕ್ಕ ಹಾಕಲಾಯಿತು. 287 ಮತಗಳು ಮಸೂದೆ ಪರ ಹಾಗೂ ಎಂಟು ಮತಗಳು ವಿರುದ್ಧವಾಗಿ ಚಲಾವಣೆಯಾದವು. ಈ ವೇಳೆ ಇಡೀ ಸರ್ಕಾರವನ್ನು ನಾನು ಎದ್ದು ನಿಲ್ಲಿಸಿದೆ ಎಂದು ಒವೈಸಿ ಹೇಳಿದ್ದಕ್ಕೆ, ನಾವು ಉಗ್ರವಾದದ ವಿರುದ್ಧ ಎದ್ದು ನಿಂತಿದ್ದೇವೆ ಎಂದು ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದರು.

ಆರ್‌ಟಿಐ ವಿಧೇಯಕ ಸ್ಥಾಯಿ ಸಮಿತಿಗೆ ಒಪ್ಪಿಸಿ

ಮಾಹಿತಿ ಹಕ್ಕು ತಿದ್ದುಪಡಿ ವಿಧೇಯಕವನ್ನು ಸಂಸತ್‌ನ ಸ್ಥಾಯಿ ಸಮಿತಿಗೆ ಒಪ್ಪಿಸಿ, ಪರಿಶೀಲನೆ ನಡೆಸಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಒತ್ತಾಯಿಸಿದೆ. ಈ ವಿಧೇಯಕದಲ್ಲಿ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕಲಾಗಿದೆ, ಮಾಹಿತಿ ಆಯೋಗದ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿದೆ. ಹೀಗಾಗಿ ಇದನ್ನು ಅಂಗೀಕರಿಸುವ ಮುನ್ನ ಸ್ಥಾಯಿ ಸಮಿತಿಯ ಪರಿಶೀಲನೆಗೆ ಒಪ್ಪಿಸಬೇಕು ಎಂದು ಗುಲಾಂ ನಬಿ ಆಜಾದ್‌ ಆಗ್ರಹಿಸಿದರು. ಇದೇ ವೇಳೆ, ಆರ್‌ಟಿಐ ಮಾತ್ರವಲ್ಲದೆ, ತ್ರಿವಳಿ ತಲಾಖ್‌, ಕಾರ್ಮಿಕ ಸುಧಾರಣೆ, ಕಾನೂನುಬಾಹಿರ ಚಟುವಟಿಕೆ ವಿಧೇಯಕ ಸೇರಿದಂತೆ 7 ಮಸೂದೆಗಳನ್ನು ಸ್ಥಾಯಿ ಸಮಿತಿಗೆ ಒಪ್ಪಿಸುವಂತೆ ಟಿಎಂಸಿ ಆಗ್ರಹಿಸಿದೆ.

ತೀರ್ಪಿನ ಭಾಷಾಂತರ

ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಕನ್ನಡ ಸೇರಿದಂತೆ 9 ಭಾಷೆಗಳಿಗೆ ಭಾಷಾಂತರ ಮಾಡಿ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಲಾಗಿದೆ ಎಂದು ಲೋಕಸಭೆಯಲ್ಲಿ ಸಚಿವ ರವಿಶಂಕರ್‌ ಪ್ರಸಾದ್‌ ಮಾಹಿತಿ ನೀಡಿದ್ದಾರೆ.

ಪೋಕ್ಸೋ ತಿದ್ದುಪಡಿಗೆ ರಾಜ್ಯಸಭೆ ಅಸ್ತು

ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗರಿಷ್ಠ ಗಲ್ಲುಶಿಕ್ಷೆ ವಿಧಿಸುವ ಪ್ರಸ್ತಾಪವಿರುವ ಪೋಕ್ಸೋ ತಿದ್ದುಪಡಿ ವಿಧೇಯಕ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ. ಸದಸ್ಯರೆಲ್ಲರೂ ವಿಧೇಯಕದಲ್ಲಿನ ಪ್ರಸ್ತಾಪಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ

ಅಮೆರಿಕ ಅಧ್ಯಕ್ಷ ಟ್ರಂಪ್‌ ಹಾಗೂ ಪ್ರಧಾನಿ ಮೋದಿ ಭೇಟಿ ವೇಳೆ ಕಾಶ್ಮೀರ ಮಧ್ಯಸ್ಥಿಕೆ ವಿಚಾರ ಪ್ರಸ್ತಾಪವಾಗಿಯೇ ಇಲ್ಲ. ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮಧ್ಯಸ್ಥಿಕೆ ಮಾಡುವಂತೆ ಮೋದಿ ಕೋರಿಕೊಂಡಿದ್ದರು ಎಂದು ಟ್ರಂಪ್‌ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣವಾದ ಹಿನ್ನೆಲೆ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಇದಕ್ಕೂ ಮೊದಲು ಸದನದಲ್ಲಿ ಗದ್ದಲವೆಬ್ಬಿಸಿದ ಪ್ರತಿಪಕ್ಷಗಳು, ಪ್ರಧಾನಿ ಮೋದಿಯವರೇ ಖುದ್ದಾಗಿ ಸದನಕ್ಕೆ ಬಂದು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದವು. ಜತೆಗೆ, ಒಂದು ಹಂತದಲ್ಲಿ ಸಭಾತ್ಯಾಗವನ್ನೂ ಮಾಡಿದವು.
ಉಗ್ರ ಸೇರ್ಪಡೆ ಇಳಿಮುಖ: ಜಮ್ಮು-ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಸೇರುತ್ತಿರುವ ಯುವಕರ ಪ್ರಮಾಣ ಶೇ.40ರಷ್ಟು ಕಡಿಮೆಯಾಗಿದೆ ಎಂದು ಸರ್ಕಾರ ಹೇಳಿದೆ. ಇಂದು ತಲಾಖ್‌ ವಿಧೇಯಕ: ಗುರುವಾರ ತ್ರಿವಳಿ ತಲಾಖ್‌ ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದ್ದು, ಸಂಸದರಿಗೆ ಬಿಜೆಪಿ ವಿಪ್‌ ಜಾರಿ ಮಾಡಿದೆ. ಎಲ್ಲರೂ ಸದನದಲ್ಲಿ ಹಾಜರಿರುವಂತೆ ಸೂಚಿಸಿದೆ.

ಮುಖ್ಯಾಂಶಗಳು

•ಸದ್ಯ ಸಂಘಟನೆಗಳನ್ನು ಮಾತ್ರ ಉಗ್ರ ಸಂಘಟನೆ ಎಂದು ಘೋಷಿಸಲು ಅವಕಾಶ
•ಈ ಕಾಯ್ದೆ ಜಾರಿಯಾದರೆ ವ್ಯಕ್ತಿಯನ್ನೂ ಉಗ್ರ ಎಂದು ಘೋಷಿಸಲು ಅವಕಾಶ
•ಉಗ್ರರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯನ್ನು ಉಗ್ರ ಎಂದು ಎನ್‌ಐಎ ಘೋಷಿಸಬಹುದು •ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ 4ನೇ ಶೆಡ್ಯೂಲ್ಗೆ ತಿದ್ದುಪಡಿ

ಟಾಪ್ ನ್ಯೂಸ್

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.