ಜೆಎನ್ ಯು ಘರ್ಷಣೆ ನನಗೆ ಮುಂಬೈ 26-11 ದಾಳಿಯನ್ನು ನೆನಪಿಸಿತು: ಉದ್ಧವ್ ಠಾಕ್ರೆ
Team Udayavani, Jan 6, 2020, 2:47 PM IST
ಮುಂಬೈ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಜೆಎನ್ ಯುವಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆ ತನಗೆ ಮುಂಬೈ 26-11 ದಾಳಿಯನ್ನು ನೆನಪಿಸಿತು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮುಂಬೈನ ತಮ್ಮ ನಿವಾಸ ಮಾತೋಶ್ರೀಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜವಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿಗಳ ಘರ್ಷಣೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ದೂರಿದರು.
ರವಿವಾರ ರಾತ್ರಿ ಜೆಎನ್ ವಿಶ್ವವಿದ್ಯಾಲಯದದಲ್ಲಿ ಮುಸುಕುಧಾರಿ ವಿದ್ಯಾರ್ಥಿಗಳ ಗುಂಪೊಂದು ಕ್ಯಾಂಪಸ್ ಒಳಗೆ ನುಗ್ಗಿ ವಿದ್ಯಾರ್ಥಿ ಸಂಘದ ನಾಯಕ, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಹಲ್ಲೆ ನಡೆಸಿತ್ತು.
ಈ ಘರ್ಷಣೆಯನ್ನು ಮುಂಬೈ ದಾಳಿಗೆ ಹೋಲಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ, ಅಂದಿನಂತೆ ನಿನ್ನೆ ಕೂಡಾ ಘರ್ಷಣೆ ಉಂಟುಮಾಡಿದವರು ತಮ್ಮ ಮುಖಗಳನ್ನು ಮುಚ್ಚಿಕೊಂಡು ಬಂದಿದ್ದರು. ಅವರ ಮುಖವಾಡ ಕಳಚಬೇಕು. ಅವರ ನಿಜ ಸ್ವರೂಪ ಬಯಲಾಗಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.