![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 20, 2018, 8:24 AM IST
ಹೊಸದಿಲ್ಲಿ: ಇನ್ನು ಮುಂದೆ ದೇಶದ ಯಾವುದೇ ವಿಶ್ವವಿದ್ಯಾನಿಲಯ ಹಾಗೂ ಕ್ಯಾಂಪಸ್‌ಗಳಲ್ಲಿ ಪ್ಲಾಸ್ಟಿಕ್‌ನ ವಸ್ತುಗಳನ್ನು ಬಳಸುವಂತಿಲ್ಲ. ಪರಿಸರ ರಕ್ಷಣೆಯ ನಿಟ್ಟಿನಲ್ಲಿ ಇಂತಹದೊಂದು ನಿರ್ದೇಶನ ವನ್ನು ಯುಜಿಸಿ ನೀಡಿದೆ. ಪ್ಲಾಸ್ಟಿಕ್ ಬಾಟಲ್‌ಗಳು, ಕಪ್‌ಗಳು, ಆಹಾರ ಸಾಮಗ್ರಿ ಕಟ್ಟಿ ತರುವ ಪ್ಲಾಸ್ಟಿಕ್ ಲಕೋಟೆಗಳು, ಸ್ಟ್ರಾ, ಬಾಟಲಿ ಗಳನ್ನು ಬಳಕೆ ಮಾಡದಂತೆ ನಿಷೇಧ ಹೇರಲು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ (ಯುಜಿಸಿ) ನಿರ್ದೇಶನ ನೀಡಿದೆ.
ವಿಶ್ವ ಪರಿಸರ ದಿನ ಆಚರಿಸುವ ಬಗ್ಗೆ ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿರುವ ನಿರ್ದೇಶನವನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಸಕ್ತ ವರ್ಷ ಭಾರತದಲ್ಲಿಯೇ ವಿಶ್ವಸಂಸ್ಥೆ ನೇತೃತ್ವದಲ್ಲಿ ವಿಶ್ವ ಪರಿಸರ ದಿನ ಆಚರಿಸುವ ಬಗ್ಗೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಅದಕ್ಕೆ “ಪ್ಲಾಸ್ಟಿಕ್ ಮಾಲಿನ್ಯ ತಡೆಯಿರಿ’ ಎಂಬ ಘೋಷ ವಾಕ್ಯ ರೂಪಿಸಲಾಗಿದೆ. ಅದಕ್ಕೆ ಅನುಸಾರವಾಗಿ ಪ್ಲಾಸ್ಟಿಕ್ ಕಾಫಿ ಕಪ್, ಮಗ್, ಕೈಚೀಲ, ಆಹಾರ ಪೊಟ್ಟಣಗಳ ಬಳಕೆ ಮೇಲೆ ನಿಷೇಧ ಹೇರಬೇಕು ಎಂದು ಯುಜಿಸಿ ಎಲ್ಲ ಉನ್ನತ ಶಿಕ್ಷಣ ಮತ್ತು ವಿವಿಗಳಿಗೆ ನಿರ್ದೇಶನ ನೀಡಿದೆ. ಜತೆಗೆ, ಸ್ವತ್ಛತೆ ಕಾಪಾಡುವ ಹಾಗೂ ತ್ಯಾಜ್ಯ ವಿಲೇವಾರಿಯ ಕುರಿತು ಜಾಗೃತಿ ಮೂಡಿಸುವಂತೆಯೂ ಸೂಚಿಸಿದೆ.
ಏಕಕಾಲಕ್ಕೆ ಬಳಸುವ ಎಲ್ಲ ರೀತಿಯ ಪ್ಲಾಸ್ಟಿಕ್, ಪಾಲಿಸ್ಟರ್ ಫೋಮ್ ವಸ್ತುಗಳ ಬಳಕೆಯನ್ನು ಪೂರ್ತಿಯಾಗಿ ನಿಲ್ಲಿಸಬೇಕು. ಸ್ವತ್ಛ ಭಾರತ ಅಭಿಯಾನದಡಿ ಪ್ಲಾಸ್ಟಿಕ್ ನಿರ್ಮೂಲನೆಯ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಿಗೆ ಮಾಹಿತಿ ನೀಡಲು ವಿವಿಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬೇಕು ಎಂದೂ ನಿರ್ದೇಶನದಲ್ಲಿ ತಿಳಿಸಲಾಗಿದೆ. ಶಾಲೆಗಳ ಪರಿಸರದಲ್ಲಿಯೂ ಪ್ಲಾಸ್ಟಿಕ್ ನಿಷೇಧಿಸುವ ಕುರಿತಂತೆ ಕ್ರಮ ವಹಿಸಬೇಕೆಂದು ಸಚಿವಾಲಯ ಸೂಚಿಸಿದೆ.
ನದಿ ಬದಿ ಸ್ವಚ್ಛತೆಗೆ ತಂಡ
ದೇಶದಲ್ಲಿನ ಬೀಚ್, ನದಿ ಮತ್ತು ಕೆರೆಗಳ ಸ್ವಚ್ಛತೆಗೂ ಪರಿಸರ ಸಚಿವಾಲಯ ನಿರ್ಧರಿಸಿದ್ದು, ಅದರ ಜಾರಿಗಾಗಿ ತಂಡ ರಚಿಸಿದೆ. ಮಲಿನಗೊಂಡಿರುವ ದೇಶದ 24 ಬೀಚ್ ಹಾಗೂ 24 ನದಿ ಮತ್ತು ಕೆರೆಗಳ ಸ್ವತ್ಛತೆಗಾಗಿ 19 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳ ನೇತೃತ್ವದಲ್ಲಿ ಇಲ್ಲಿ ಸ್ವಚ್ಛತಾ ಕಾರ್ಯ ನಡೆಯಲಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.