UGC-NET Exam 11 ಲಕ್ಷ ಮಂದಿ ಬರೆದಿದ್ದ ಯುಜಿಸಿ ನೆಟ್ ಪರೀಕ್ಷೆ ರದ್ದು , ಸಿಬಿಐ ತನಿಖೆ
ಪರೀಕ್ಷೆ ನಡೆದ ಮರುದಿನವೇ ರದ್ದುಗೊಳಿಸಿದ ಕೇಂದ್ರ ಸರಕಾರ
Team Udayavani, Jun 20, 2024, 7:10 AM IST
ಹೊಸದಿಲ್ಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಜೂ. 18ರಂದು ನಡೆಸಿದ್ದ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಯನ್ನೂ ಕೇಂದ್ರ ಸರಕಾರ ಬುಧವಾರ ರದ್ದುಗೊಳಿಸಿದೆ. ಈ ಪರೀಕ್ಷೆಯಲ್ಲೂ ಅಕ್ರಮ ನಡೆದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಜತೆಗೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಬಿಐಗೆ ಹಸ್ತಾಂತರಿಸಲೂ ತೀರ್ಮಾನಿಸಲಾಗಿದೆ. ಜೂ. 18ರಂದು ದೇಶಾದ್ಯಂತ ಪರೀಕ್ಷೆ ನಡೆದಿತ್ತು.
11 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಈ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ನ್ಯಾಶನಲ್ ಸೈಬರ್ ಕ್ರೈಮ್ ಅನಾಲಿಟಿಕ್ಸ್ ಘಟಕವು ಮಾಹಿತಿ ನೀಡಿದೆ. ಹೀಗಾಗಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಹೊಸದಾಗಿ ಪರೀಕ್ಷೆ ನಡೆಸುವ ಬಗ್ಗೆ ಶೀಘ್ರವೇ ಮಾಹಿತಿ ನೀಡಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಮಂಗಳವಾರ ನಡೆದಿದ್ದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಎನ್‌ಟಿಎ ವಿರುದ್ಧ ಆಕ್ಷೇಪವನ್ನೂ ವ್ಯಕ್ತಪಡಿಸಿತ್ತು.
ಏನಿದು ಅಕ್ರಮ?
-ಜೂ. 18ರಂದು ಪರೀಕ್ಷೆ ನಡೆದಿತ್ತು
-11 ಲಕ್ಷ ಮಂದಿ ಪರೀಕ್ಷೆಯಲ್ಲಿ ಭಾಗಿ
-ಇಲ್ಲೂ ಅಕ್ರಮ ನಡೆದ ಬಗ್ಗೆ ಸೈಬರ್ ಕ್ರೈಂ ಥೆÅಟ್ ಅನಾಲಿಟಿಕ್ಸ್ ಎಚ್ಚರಿಕೆ
-ಪರೀಕ್ಷೆ ರದ್ದತಿಗೆ ಕೇಂದ್ರ ತೀರ್ಮಾನ
-ಪ್ರಕರಣದ ತನಿಖೆ ಹೊಣೆ ಸಿಬಿಐಗೆ
ಯಾರಿಗೆಲ್ಲ ಅನ್ವಯ?
ವಿ.ವಿ.ಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಿಎಚ್‌ಡಿ ಪದವಿ ಪಡೆಯಲು, ವಿ.ವಿ.ಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ, ಜೂನಿಯರ್ ರೀಸರ್ಚ್ ಫೆಲೋಶಿಪ್‌ಗೆ ಅರ್ಹತೆ ಪಡೆಯಲು ಯುಜಿಸಿ ಈ ಪರೀಕ್ಷೆ ನಡೆಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.