Ujjain; ಹೋಳಿ ವೇಳೆ ಮಹಾಕಾಲ್ ದೇವಸ್ಥಾನದಲ್ಲಿ ಅಗ್ನಿ ಅವಘಡ: 13 ಅರ್ಚಕರಿಗೆ ಗಾಯ
Team Udayavani, Mar 25, 2024, 9:31 AM IST
ಭೋಪಾಲ್: ಮಧ್ಯಪ್ರದೇಶದ ಪ್ರಸಿದ್ದ ಉಜ್ಜಯಿನಿ ಮಹಾಕಾಲ್ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿ 13 ಮಂದಿ ಅರ್ಚಕರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮಹಾಕಾಲ್ ದೇವಾಲಯದ ಗರ್ಭಗೃಹದಲ್ಲಿ ಭಸ್ಮ ಆರತಿ ಸಮಯದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಹೋಳಿ ಆಚರಣೆಗಳ ನಡುವೆ ಈ ಘಟನೆ ಸಂಭವಿಸಿದೆ, ಮಹಾಕಾಲ್ ದೇವಸ್ಥಾನದಲ್ಲಿ ಭಸ್ಮ ಆರತಿಯ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಧಾರ್ಮಿಕ ಸಮಾರಂಭದ ಅಂಗವಾಗಿ ‘ಗುಲಾಲ್’ (ಆಚರಣೆಗಳು ಮತ್ತು ಹೋಳಿ ಸಮಯದಲ್ಲಿ ಬಳಸುವ ಬಣ್ಣದ ಪುಡಿ) ಎಸೆಯುವ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಗಾಯಗೊಂಡ ಭಕ್ತರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಗಾಯಾಳುಗಳ ಪ್ರಸ್ತುತ ಸ್ಥಿತಿ ಇನ್ನೂ ಬಹಿರಂಗವಾಗಿಲ್ಲ.
#WATCH | Ujjain, Madhya Pradesh | 13 people injured in a fire that broke out in the ‘garbhagriha’ of Mahakal Temple during bhasma aarti today. Holi celebrations were underway here when the incident occurred. The injured have been admitted to District Hospital.
(Earlier visuals… pic.twitter.com/cIUSlRirwo
— ANI (@ANI) March 25, 2024
ಅಗ್ನಿ ಅವಘಡಕ್ಕೆ ಕಾರಣದ ತನಿಖೆ ನಡೆಯುತ್ತಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ, ಅಧಿಕಾರಿಗಳು ಈ ವಿಷಯವನ್ನು ಪರಿಶೀಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.