ಮಧ್ಯರಾತ್ರಿ ಮಿಶನ್ ಕಾಶ್ಮೀರ: ಮೆಹಬೂಬಾ,ಒಮರ್ ಗೃಹ ಬಂಧನ
ಇಂದಿನ ಸಂಪುಟದಲ್ಲಿ ಮಹತ್ವದ ನಿರ್ಧಾರ ನಿರೀಕ್ಷೆ; ಸೆಕ್ಷನ್ 144 ಜಾರಿ; ಕಾಶ್ಮೀರದಲ್ಲಿ ಶಾಲೆಗಳಿಗೆ ರಜೆ
Team Udayavani, Aug 5, 2019, 1:10 AM IST
ಹೊಸದಿಲ್ಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರವಿವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಪ್ರಮುಖ ರಾಜಕೀಯ ನಾಯಕರಾದ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ, ಸಜ್ಜದ್ ಲೋನ್, ಶಾಸಕ ಎಂ.ವೈ. ತಾರಿಗಾಮಿ, ಉಸ್ಮಾನ್ ಮಜೀದ್ ಸಹಿತ ಪ್ರಮುಖರನ್ನು ಗೃಹ ಬಂಧನಕ್ಕೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಮ್ಮನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಒಮರ್ ಟ್ವೀಟ್ ಮಾಡಿದ್ದರೂ, ಅದನ್ನು ಅಧಿಕೃತವಾಗಿ ಖಚಿತಪಡಿಸಲಾಗಿಲ್ಲ. ಬೆಳವಣಿಗೆಗೆ ಮುನ್ನ ಟ್ವೀಟ್ ಮಾಡಿದ್ದ
ಒಮರ್ ಅಬ್ದುಲ್ಲಾ, “ಇನ್ನು, ಕೆಲವೇ ಕ್ಷಣಗಳಲ್ಲಿ ನನ್ನ ಗೃಹ ಬಂಧನವಾಗುವ ಸಾಧ್ಯತೆಗಳಿವೆ. ಇದಕ್ಕಾಗಿ ಇಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಕೆಲವು ನಾಯಕರ ಗೃಹ ಬಂಧನವಾಗಿರುವುದನ್ನು ಕೇಳಿದ್ದು, ನನ್ನ ಬಂಧನವೂ ಮಧ್ಯರಾತ್ರಿಯಿಂದ ಜಾರಿ ಗೊಳ್ಳಬಹುದು’ ಎಂದಿದ್ದರು.
ರಾಜ್ಯಪಾಲರಿಂದ ಸಭೆ
ಈ ಎಲ್ಲ ಬೆಳವಣಿಗೆಗಳ ನಡುವೆ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರ ಡಿಜಿಪಿ, ಮುಖ್ಯ ಕಾರ್ಯದರ್ಶಿ ಸಹಿತ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಸಂಪುಟ ಸಭೆಗೂ ಮುನ್ನ ರೋಚಕತೆ
ಜಮ್ಮು ಕಾಶ್ಮೀರದ ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಚರ್ಚಿಸಲು ಸೋಮವಾರ ಬೆಳಗ್ಗೆ 9.30ಕ್ಕೆ ಕೇಂದ್ರ ಸಚಿವ ಸಂಪುಟದ ಸಭೆ ಕರೆಯಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯು ಕಾಶ್ಮೀರ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಿರುವ ಮುಂದಿನ ಕ್ರಮಗಳು ಚರ್ಚೆಯಾಗಲಿವೆ ಎಂದು ಅಂದಾಜಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಆ ರಾಜ್ಯದ ನಾಯಕರನ್ನು ಗೃಹಬಂಧನದಲ್ಲಿ ಇರಿಸಿರುವುದು, ಸೆಕ್ಷನ್ 144 ಜಾರಿಗೊಳಿಸಿರುವುದು ಸರಕಾರದ ನಡೆಯನ್ನು ಮತ್ತಷ್ಟು ನಿಗೂಢವಾಗಿಸಿದೆ.
ಇಂಟರ್‌ನೆಟ್ ಸೇವೆ ಕಡಿತ
ಕಣಿವೆ ರಾಜ್ಯದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕಡಿತಗೊಳಿಸಲಾಗಿದೆ. ಸಾರ್ವಜನಿಕರು ಮನೆಗಳಿಂದ ಹೊರ ಬರದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಮಾಹಿತಿ ನೀಡಿದ್ದಾರೆ.
ಕರ್ಫ್ಯೂ ಜಾರಿ ಮಾಡಿಲ್ಲ
ಕಾಶ್ಮೀರದಲ್ಲಿ ಸೆಕ್ಷನ್ 144 ಜಾರಿಗೊಂಡ ಹಿನ್ನೆಲೆಯಲ್ಲಿ ಪ್ರಕಟನೆ ಹೊರಡಿಸಿರುವ ಜಮ್ಮು ಕಾಶ್ಮೀರ ಸರಕಾರವು ಶ್ರೀನಗರ, ರಿಯಾಸಿ ಜಿಲ್ಲೆಗಳಲ್ಲಿ ರವಿವಾರ ಮಧ್ಯರಾತ್ರಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ವರಿಗಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಸಭೆಗಳು, ರ್ಯಾಲಿಗಳನ್ನು ನಡೆಸುವಂತಿಲ್ಲ. ತುರ್ತು ಸಿಬಂದಿ ಕಡ್ಡಾಯವಾಗಿ ತಮಗೆ ನೀಡಿರುವ ಗುರುತಿನ ಚೀಟಿಗಳನ್ನು (ಐಡಿ ಕಾರ್ಡ್‌ಗಳನ್ನು) ಧರಿಸಿಕೊಂಡೇ ಓಡಾಡಬೇಕು ಎಂದಿದೆ. ಆದರೆ ಎಲ್ಲೆಡೆ ಕರ್ಫ್ಯೂ ಹೇರಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದ್ದು, ಎಲ್ಲೂ ಕರ್ಫ್ಯೂ ಹೇರಿಲ್ಲ ಎಂದು ಸ್ಪಷ್ಟಪಡಿಸಿದೆ. ಪೊಲೀಸರು ಮೈಕ್ ಮೂಲಕ ಸೆಕ್ಷನ್ ಜಾರಿಯನ್ನು ಘೋಷಿಸಿದ್ದಾರೆ.
ಶ್ರೀನಗರ ಹಾಗೂ ರಿಯಾಸಿ ಜಿಲ್ಲೆಯಲ್ಲಿ ರವಿವಾರ ಮಧ್ಯರಾತ್ರಿಯಿಂದ ಜಾರಿಗೊಳ್ಳುವಂತೆ ಅನಿರ್ದಿ ಷ್ಟಾವಧಿಯವರೆಗೆ 144ನೇ ಸೆಕ್ಷನ್ ಜಾರಿಗೊಳಿಸಲಾಗಿದೆ. ಜಮ್ಮುವಿಗೆ ಹೆಚ್ಚುವರಿ ಸೇನಾ ತುಕಡಿಗಳನ್ನು ಕರೆಯಿಸಿಕೊಳ್ಳಲಾಗಿದೆ. ಶಾಲಾ, ಕಾಲೇಜು ಸಹಿತ ಎಲ್ಲ ರೀತಿಯ ಶೈಕ್ಷಣಿಕ ಸಂಸ್ಥೆಗಳಿಗೆ ಮುಂದಿನ ಆದೇಶದ ವರೆಗೆ ರಜೆ ಘೋಷಿಸಲಾಗಿದೆ.
I’m especially concerned about the people living in the Pir Panchal & Chenab Valley regions. These areas have been very susceptible to attempts at communal violence. I hope the Govt has taken adequate precautions to ensure no communal trouble breaks out.
— Omar Abdullah (@OmarAbdullah) August 4, 2019
How ironic that elected representatives like us who fought for peace are under house arrest. The world watches as people & their voices are being muzzled in J&K. The same Kashmir that chose a secular democratic India is facing oppression of unimaginable magnitude. Wake up India
— Mehbooba Mufti (@MehboobaMufti) August 4, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.